ADVERTISEMENT

ಯಾದಗಿರಿ | ಅಪಹರಿಸಿ ಅತ್ಯಾಚಾರ: ಪೋಕ್ಸೊ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2024, 16:20 IST
Last Updated 6 ಮಾರ್ಚ್ 2024, 16:20 IST

ಯಾದಗಿರಿ: ತಾಲ್ಲೂಕಿನ ಗ್ರಾಮವೊಂದರಲ್ಲಿ 16 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದು, ಸೈದಾಪುರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಘಟನೆ ವಿವರ: ಫೆಬ್ರುವರಿ 8ರಂದು ಆರೋಪಿ 30 ವರ್ಷದ ಯುವಕ ತಮ್ಮದೇ ಗ್ರಾಮದ ಬಾಲಕಿಯನ್ನು ಹೈದರಾಬಾದ್‌ಗೆ ಅ‍ಪಹರಿಸಿಕೊಂಡು ಹೋಗಿ ವಿವಾಹ ಮಾಡಿಕೊಂಡಿದ್ದಾನೆ. ನಂತರ ಅತ್ಯಾಚಾರ ಮಾಡಿದ್ದಾನೆ ಎಂದು ಪೋಷಕರು ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT