ಸುರಪುರ: ನಗರದ ಉದ್ಯಮಿ ಮತ್ತು ಗಂಜ್ ವರ್ತಕರ ಸಂಘದ ಅಧ್ಯಕ್ಷ ಕಿಶೋರಚಂದ್ ಸಿ.ಜೈನ್ ಅವರು ಶ್ರೇಷ್ಠ ವರ್ತಕ ಪ್ರಶಸ್ತಿ ಪಡೆದಿದ್ದಾರೆ.
ಶನಿವಾರ ಗದಗನಲ್ಲಿ ಗದಗ ಜಿಲ್ಲಾ ವಾಣಿಜ್ಯೋದ್ಯಮಿ ಸಂಸ್ಥೆ ವತಿಯಿಂದ ಪರಿವರ್ತನ- ಉತ್ತರ ಕರ್ನಾಟಕ ವಾಣಿಜ್ಯೋದ್ಯಮಿಗಳ ಸಮ್ಮೇಳನ 2021- 22 ಸಮಾರಂಭದಲ್ಲಿಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಪ್ರಶಸ್ತಿ ಪ್ರದಾನ ಮಾಡಿದರು.
ಉದ್ಯಮ ಕ್ಷೇತ್ರದಲ್ಲಿ ಸಾಧಿಸಿದ ಸಾಧನೆಯನ್ನು ಪರಿಗಣಿಸಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಸಿ.ಸಿ.ಪಾಟೀಲ, ಹಾಲಪ್ಪ ಆಚಾರ್, ಗದಗ ಶಾಸಕ ಎಚ್.ಕೆ.ಪಾಟೀಲ, ಗದಗ ವಾಣಿಜ್ಯೋದ್ಯಮಿ ಸಂಸ್ಥೆಯ ಕಾರ್ಯದರ್ಶಿ ವೀರೇಶ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.