ADVERTISEMENT

ಯಾದಗಿರಿ: ಉಕ್ಕಿ ಹರಿಯುವ ಕೃಷ್ಣಾ ನದಿಯಲ್ಲಿ ತೆಪ್ಪೋತ್ಸವ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2025, 5:28 IST
Last Updated 22 ಆಗಸ್ಟ್ 2025, 5:28 IST
<div class="paragraphs"><p>ಹುಣಸಗಿ ತಾಲ್ಲೂಕಿನ ದೇವರಗಡ್ಡಿ ಗ್ರಾಮದ ಕೃಷ್ಣಾ ನದಿಯಲ್ಲಿ ಭಕ್ತರು ಗದ್ದೆಮ್ಮ ದೇವಿಯ ತೆಪ್ಪೋತ್ಸವ ನೆರವೇರಿಸಿದರು</p></div>

ಹುಣಸಗಿ ತಾಲ್ಲೂಕಿನ ದೇವರಗಡ್ಡಿ ಗ್ರಾಮದ ಕೃಷ್ಣಾ ನದಿಯಲ್ಲಿ ಭಕ್ತರು ಗದ್ದೆಮ್ಮ ದೇವಿಯ ತೆಪ್ಪೋತ್ಸವ ನೆರವೇರಿಸಿದರು

   

ಯಾದಗಿರಿ: ಹುಣಸಗಿ ತಾಲ್ಲೂಕಿನ ದೇವರಗಡ್ಡಿ ಗ್ರಾಮದ ಗದ್ದೆಮ್ಮ ದೇವಿಯ ತೆಪ್ಪೋತ್ಸವವನ್ನು ಉಕ್ಕಿ ಹರಿಯುವ ಕೃಷ್ಣಾ ನದಿಯಲ್ಲಿ ಭಕ್ತರು ನೆರವೇರಿಸಿದರು.

ದೇವರಗಡ್ಡಿ ಗ್ರಾಮ ಹಾಗೂ ಸುತ್ತಲಿನ ಗ್ರಾಮಗಳ ಭಕ್ತರು ಗೆದ್ದಮ್ಮ ದೇವಿ ಮೂರ್ತಿಯ ತೆಪ್ಪೋತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಬುಧವಾರ ದೇವಿಯ ಮೂರ್ತಿಯನ್ನು ಹೊತ್ತು ಕೃಷ್ಣಾ ನದಿಯ ತೀರಕ್ಕೆ ಬಂದರು. ಪ್ರವಾಹದ ನಡುವೆಯೂ ಭಕ್ತರು ದೇವಿಯ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದರು.

ADVERTISEMENT

ಹೂವಿನಿಂದ ಅಲಂಕರಿಸಿದ ತೆಪ್ಪದಲ್ಲಿ ಭಕ್ತರು ಹುಗ್ಗಿ, ಮಡಿಕೆ ಇತರೆ ಸಾಮಗ್ರಿಗಳನ್ನು ಇರಿಸಿದರು. ಪ್ರವಾಹದ ಭೀತಿಯ ನಡುವೆಯೂ ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ತೆಪ್ಪೋತ್ಸವ ನೆರವೇರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.