ಯಾದಗಿರಿ: ನಾರಾಯಣಪುರ ಬಸವಸಾಗರ ಜಲಾಶಯದ ಒಳಹರಿವು ಹೆಚ್ಚಾಗಿ ಕೃಷ್ಣಾ ನದಿಗೆ 30 ಕ್ರೆಸ್ಟ್‌ಗೇಟ್‌ಗಳಿಂದ ನೀರು ಹರಿಸುತ್ತಿರುವುದರಿಂದ ಶಹಾಪುರ ತಾಲ್ಲೂಕಿನ ಕೊಳ್ಳೂರ(ಎಂ) ಗ್ರಾಮದ ನದಿ ಸೇತುವೆ ಗುರುವಾರ ಮುಳುಗಡೆಯಾಗಿದೆ.
ನೆರೆ ಮಹಾರಾಷ್ಟ್ರದಲ್ಲಿ ಹೆಚ್ಚಿನ ಮಳೆ ಆಗುತ್ತಿರುವುದರಿಂದ ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 2.60 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗುತ್ತಿದೆ. ಇದರಿಂದ ಪ್ರವಾಹದ ನೀರು ಸೇತುವೆಯನ್ನು ಮುಳುಗಿಸಿದ್ದು, ತಗ್ಗು ಪ್ರದೇಶದ ಜಮೀನುಗಳಿಗೂ ನುಗ್ಗಿದೆ.
ಶಹಾಪುರ-ದೇವದುರ್ಗ ರಾಜ್ಯ ಹೆದ್ದಾರಿಯ ರಸ್ತೆ ಸಂಚಾರವನ್ನು ಮುಂಜಾಗ್ರತಾ ಕ್ರಮವಾಗಿ ಸ್ಥಗಿತಗೊಳಿಸಲಾಗಿದೆ. ಶಹಾಪುರ ಠಾಣೆಯ ಪೊಲೀಸ್ ಸಿಬ್ಬಂದಿಯನ್ನು ಬಂದೋಬಸ್ತಿಗೆ ನಿಯೋಜಿಸಲಾಗಿದೆ.
ರಾಯಚೂರು ಹಾಗೂ ದೇವದುರ್ಗಕ್ಕೆ ಹೋಗಿ ಬರಲು ಸುರಪುರ ತಾಲ್ಲೂಕಿನ ತಿಂಥಣಿ ಸೇತುವೆ ಬಳಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.