ADVERTISEMENT

29ರಂದು ಕುವೆಂಪು ಜಯಂತ್ಯುತ್ಸವ

ಹೆಚ್ಚುವರಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2019, 15:30 IST
Last Updated 18 ಡಿಸೆಂಬರ್ 2019, 15:30 IST
ರಾಷ್ಟ್ರಕವಿ ಕುವೆಂಪು ಜಯಂತ್ಯುತ್ಸವ ಪೂರ್ವಸಿದ್ಧತಾ ಸಭೆಯಲ್ಲಿ ಪ್ರಕಾಶ್ ಜಿ.ರಜಪೂತ ಮಾತನಾಡಿದರು
ರಾಷ್ಟ್ರಕವಿ ಕುವೆಂಪು ಜಯಂತ್ಯುತ್ಸವ ಪೂರ್ವಸಿದ್ಧತಾ ಸಭೆಯಲ್ಲಿ ಪ್ರಕಾಶ್ ಜಿ.ರಜಪೂತ ಮಾತನಾಡಿದರು   

ಯಾದಗಿರಿ: ಜಿಲ್ಲಾಡಳಿತದ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಜಯಂತ್ಯುತ್ಸವ ಡಿಸೆಂಬರ್ 29ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ತಿಳಿಸಿದರು.

ಹೆಚ್ಚುವರಿಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ವಿಶ್ವ ಮಾನವ (ರಾಷ್ಟ್ರಕವಿ ಕುವೆಂಪು ಜಯಂತ್ಯುತ್ಸವ) ದಿನಾಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಶ್ವ ಮಾನವ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಅದರಂತೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ ಶಾಲಾ-ಕಾಲೇಜುಗಳಲ್ಲಿಯೂ ವಿಶ್ವ ಮಾನವ ದಿನವನ್ನು ಕಡ್ಡಾಯವಾಗಿ ಆಚರಿಸಬೇಕು. ತಹಶೀಲ್ದಾರರು ತಾಲ್ಲೂಕು ಮಟ್ಟದಲ್ಲಿ ಸದರಿ ಜಯಂತಿಯನ್ನು ವಿಜೃಂಭಣೆಯಿಂದ ಆಚರಣೆ ಮಾಡಬೇಕು ಎಂದು ಸೂಚಿಸಿದರು.

ADVERTISEMENT

ಯಾದಗಿರಿ ನಗರದ ರಸ್ತೆಗಳ ಸ್ವಚ್ಛತೆಗೆ ನಗರಸಭೆ ಕ್ರಮ ಕೈಗೊಳ್ಳಬೇಕು. ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಮಾಜದ ಮುಖಂಡರು, ವಿದ್ಯಾರ್ಥಿಗಳು, ಹಾಗೂ ಅಧಿಕಾರಿಗಳಿಗೆ ಉಪಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಜಿಲ್ಲಾ ಪೊಲೀಸ್ ಇಲಾಖೆಗೆ ತಿಳಿಸಲಾಯಿತು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ದತ್ತಪ್ಪ ಕಲ್ಲೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.