ADVERTISEMENT

ಚಿರತೆ ಪ್ರತ್ಯಕ್ಷ ವದಂತಿ: ಅರಣ್ಯ ಅಧಿಕಾರಿ ಭೇಟಿ

​ಪ್ರಜಾವಾಣಿ ವಾರ್ತೆ
Published 23 ಜನವರಿ 2021, 2:06 IST
Last Updated 23 ಜನವರಿ 2021, 2:06 IST
ಶಹಾಪುರ ತಾಲ್ಲೂಕಿನ ರಾಜಾಪುರ ಗ್ರಾಮದ ಬಳಿ ಚಿರತೆ ಪ್ರತ್ಯೇಕ್ಷ ವದಂತಿ ಹಿನ್ನಲೆಯಲ್ಲಿ ಉಪವಲಯ ಅರಣ್ಯ ಅಧಿಕಾರಿ ಐ.ಬಿ.ಹೂಗಾರ ಶುಕ್ರವಾರ ಘಟನಾಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು
ಶಹಾಪುರ ತಾಲ್ಲೂಕಿನ ರಾಜಾಪುರ ಗ್ರಾಮದ ಬಳಿ ಚಿರತೆ ಪ್ರತ್ಯೇಕ್ಷ ವದಂತಿ ಹಿನ್ನಲೆಯಲ್ಲಿ ಉಪವಲಯ ಅರಣ್ಯ ಅಧಿಕಾರಿ ಐ.ಬಿ.ಹೂಗಾರ ಶುಕ್ರವಾರ ಘಟನಾಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು   

ಶಹಾಪುರ: ತಾಲ್ಲೂಕಿನ ರಾಜಾಪುರ- ಗೋಗಿ ಮಧ್ಯದಲ್ಲಿ ಗುರುವಾರ ರಾತ್ರಿ ಚಿರತೆ ಪ್ರತ್ಯಕ್ಷ ವದಂತಿ ಹಿನ್ನೆಲೆಯಲ್ಲಿ ಉಪವಲಯ ಅರಣ್ಯ ಅಧಿಕಾರಿ ಐ.ಬಿ.ಹೂಗಾರ ಭೇಟಿ ನೀಡಿ ಪರಿಶೀಲಿಸಿದರು.

ತಾಲ್ಲೂಕಿನ ರಾಜಾಪುರ ಗ್ರಾಮದ ಯುವಕ ಪರಶುರಾಮ ಗೋಗಿ ಗ್ರಾಮಕ್ಕೆ ಆಗಮಿಸುವಾಗ ಚಿರತೆ ಕಂಡಿರುವುದಾಗಿ ತಿಳಿಸಿದರು. ಇದರಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು.

‘ಶುಕ್ರವಾರ ಬೆಳಿಗ್ಗೆ ಗ್ರಾಮದ ಘಟನಾ ಸ್ಥಳಕ್ಕೆ ನಮ್ಮ ಸಿಬ್ಬಂದಿಯ ಜೊತೆ ಭೇಟಿ ನೀಡಿ ಪರಿಶೀಲಿಸಿದೇವು. ಅಲ್ಲಿ ಚಿರತೆಯ ಯಾವುದೇ ಹೆಜ್ಜೆ ಗುರುತು ಕಾಣಿಸಿಕೊಂಡಿಲ್ಲ. ಅಲ್ಲದೆ ಪ್ರತ್ಯಕ್ಷದರ್ಶಿ ಪರಶುರಾಮ ಜೊತೆ ಮಾತನಾಡಿ ಮಾಹಿತಿ ಪಡೆದುಕೊಂಡೆವು. ಗ್ರಾಮಸ್ಥರಿಗೆ ಚಿರತೆ ಇರುವುದುಕಂಡು ಬಂದರೆ ಅರಣ್ಯ ಇಲಾಖೆಗೆ ತಕ್ಷಣ ಮಾಹಿತಿ ನೀಡುವಂತೆ’ ಉಪವಲಯ ಅರಣ್ಯ ಅಧಿಕಾರಿ ಐ.ಬಿ.ಹೂಗಾರ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.