ADVERTISEMENT

ಯಾದಗಿರಿ | ಆದಾಯಕ್ಕಿಂತ ಹೆಚ್ಚಿನ ಆಸ್ತಿ; ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 15 ಮೇ 2025, 7:12 IST
Last Updated 15 ಮೇ 2025, 7:12 IST
   

ಯಾದಗಿರಿ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಜಿಲ್ಲೆಯ ಶಹಾಪುರ ತಾಲ್ಲೂಕು ತಹಶೀಲ್ದಾರ್ ಉಮಾಕಾಂತ ಹಳ್ಳೆಯವರ ಮನೆ ಮೇಲೆ ಸೇರಿದಂತೆ 5 ಕಡೆ ಗುರುವಾರ ಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ.

ಕಲಬುರಗಿ ನಗರದ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಮನೆಯಲ್ಲೂ ದಾಳಿ ಮಾಡಲಾಗಿದೆ.

ಶಹಾಪುರದ ತಹಶೀಲ್ದಾರ್ ಕಚೇರಿಯಲ್ಲಿ ದಾಖಲೆ ಪರಿಶೀಲನೆ ನಡೆಯುತ್ತಿದೆ.

ADVERTISEMENT

ಲೋಕಾಯುಕ್ತ ಡಿವೈಎಸ್ಪಿ ಜೆ.ಎಚ್.ಇನಾಂದಾರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಇನ್ ಸ್ಪೆಕ್ಟರ್ ಗಳಾದ ಸಿದ್ದರಾಯ, ಸಂಗಮೇಶ, ಅರ್ಜುನಪ್ಪ, ಅಕ್ಕಮಹಾದೇವಿ, ಬಾಬಾ ಸಾಹೇಬ ಪಾಟೀಲ ತಂಡದಲ್ಲಿದ್ದಾರೆ.

ಕೆಲ ದಿನಗಳ ಹಿಂದೆ ಸುರಪುರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ.ನಾಯಕ ಅವರಿಗೆ ಸೇರಿದ ಐದು ಕಡೆ ಲೋಕಾಯುಕ್ತ ದಾಳಿ ಮಾಡಲಾಗಿತ್ತು. ಅಪಾರ ಪ್ರಮಾಣ ಆಸ್ತಿ ಪತ್ತೆಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.