ಯಾದಗಿರಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪ್ರಭುಲಿಂಗ ಕೆ.ಮಾನಕರ್ ಅವರ ಕಲಬುರಗಿಯ ಕರುಣೇಶ್ವರ ನಗರದ ಮನೆ ಹಾಗೂ ಯಾದಗಿರಿ ನಗರದ ಬಾಡಿಗೆ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ದಾಳಿ ಮಾಡಿದ್ದಾರೆ.
ದಾಳಿ ವೇಳೆ ಯಾದಗಿರಿಯ ಬಾಡಿಗೆ ಮನೆಯಲ್ಲಿ ಡಿಎಚ್ಒ ಇದ್ದು, ದಾಖಲಾತಿಗಳನ್ನು ಲೋಕಾಯುಕ್ತ ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಹಣಮಂತರಾಯ ನೇತೃತ್ವದಲ್ಲಿ ದಾಳಿ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.