ADVERTISEMENT

‘ಮಳೆಗಾಲದಲ್ಲಿ ಸ್ವಚ್ಛತೆ ಕಾಪಾಡಿ’

ಗುರುಮಠಕಲ್‌ನಲ್ಲಿ ಲೋಕಾಯುಕ್ತರಿಂದ ಆಹವಾಲು ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 22 ಜೂನ್ 2022, 1:39 IST
Last Updated 22 ಜೂನ್ 2022, 1:39 IST
ಗುರುಮಠಕಲ್ ಪುರಸಭೆ ಕಚೇರಿ ಸಭಾಂಗಣದಲ್ಲಿ ಲೋಕಾಯುಕ್ತ ಡಿಎಸ್‌ಪಿ ಮಹಮ್ಮದ್‌ ಇಸ್ಮಾಯಿಲ್ ನೇತೃತ್ವದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸಲು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಯಿತು
ಗುರುಮಠಕಲ್ ಪುರಸಭೆ ಕಚೇರಿ ಸಭಾಂಗಣದಲ್ಲಿ ಲೋಕಾಯುಕ್ತ ಡಿಎಸ್‌ಪಿ ಮಹಮ್ಮದ್‌ ಇಸ್ಮಾಯಿಲ್ ನೇತೃತ್ವದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸಲು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಯಿತು   

ಪ್ರಜಾವಾಣಿ ವಾರ್ತೆ

ಯಾದಗಿರಿ:ಪುರಸಭೆ ಅಧಿಕಾರಿಗಳು ಮುಟೇಶನ್, ಕಟ್ಟಡ ಪರವಾನಗಿ ನಿಗದಿತ ಅವಧಿಯೊಳಗೆ ನೀಡಬೇಕು. ಮಳೆಗಾಲದ ಸಮಯದಲ್ಲಿ ಸ್ವಚ್ಛತೆ, ಚರಂಡಿ ನೀರು ನಿರ್ವಹಣೆ, ಬೀದಿ ದೀಪ ಹಾಗೂ ಶೌಚಾಲಯದ ಬಗ್ಗೆ ವಿಶೇಷ ಗಮನಹರಿಸಲು ಲೋಕಾಯುಕ್ತ ಡಿಎಸ್‌ಪಿ ಮಹಮ್ಮದ್‌ ಇಸ್ಮಾಯಿಲ್ ಸೂಚನೆ ನೀಡಿದರು.

ಗುರುಮಠಕಲ್ ಪುರಸಭೆ ಕಚೇರಿ ಸಭಾಂಗಣದಲ್ಲಿ ಈಚೆಗೆ ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸಲು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸಾರ್ವಜನಿಕರ ಕುಂದುಕೊರತೆ ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ADVERTISEMENT

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪೌಷ್ಟಿಕ, ಉತ್ತಮ ಗುಣಮಟ್ಟದ ಆಹಾರ ಪದಾರ್ಥ ನೀಡಬೇಕು. ಗರ್ಭಿಣಿಯರಿಗೆ ಉತ್ತಮ ಗುಣಮಟ್ಟದ ಪೌಷ್ಟಿಕ ಉಪಾಹಾರ ಮತ್ತು ಆಹಾರಧಾನ್ಯಗಳನ್ನು ನೀಡುವಂತೆ, ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಮುಂಗಾರು ಹಂಗಾಮಿನಲ್ಲಿ ಬೀಜ ಮತ್ತು ರಸಗೊಬ್ಬರ ವಿತರಣೆ ಸಮಪರ್ಕವಾಗಿ ನಿರ್ವಹಿಸಲು ಹಾಗೂ ಕಳಪೆ ಬೀಜ ಮಾರಾಟ
ಮಾಡುವವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ
ಸೂಚಿಸಿದರು.

ಆಸ್ಪತ್ರೆಯಲ್ಲಿ ಶುಚಿತ್ವ ಕಾಪಾಡಲು ಹಾಗೂ ಕೋವಿಡ್-19 ಸಂಬಂಧಪಟ್ಟಂತೆ ಮುಂಜಾಗ್ರತೆ ಕ್ರಮ ವಹಿಸುವಂತೆ ಆರೋಗ್ಯಧಿಕಾರಿಗಳಿಗೆ ತಿಳಿಸಿದರು. ಮುಂಬರುವ ದಿನಗಳಲ್ಲಿ ಅಧಿಕಾರಿಗಳು ಆಕಸ್ಮಿಕವಾಗಿ ಆಯಾ ಕಚೇರಿಗಳಿಗೆ ಭೇಟಿ ನೀಡಿ, ಅವರ ಕೆಲಸ ಕಾರ್ಯಗಳನ್ನು ಪರಿಶೀಲಿಸಿ ತಪ್ಪು ಕಂಡು ಬಂದಲ್ಲಿ ಅಂಥವರ ವಿರುದ್ಧ ಸೂಕ್ತ ಕ್ರಮಕ್ಕಾಗಿ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.ಗುರುಮಠಕಲ್ ತಹಶೀಲ್ದಾರ್‌ ಶರಣಬಸವ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಸ್.ಖಾದ್ರೊಳಿ, ಪುರಸಭೆ, ಆರೋಗ್ಯ ಇಲಾಖೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.