ಶಹಾಪುರ: ತಾಲ್ಲೂಕಿನ ಕೊಂಗಂಡಿ ಗ್ರಾಮದಲ್ಲಿ ಭಾನುವಾರ ಹುಚ್ಚು ನಾಯಿ ಕಡಿದು 9 ಜನ, ದನಕರುಗಳು ಗಾಯಗೊಂಡಿವೆ. ಇದರಿಂದ ಗ್ರಾಮದಲ್ಲಿ ಜನರು ಭಯಭೀತರಾಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರು.
ಹುಚ್ಚ ನಾಯಿಯಿಂದ ಕಡಿತಗೊಂಡ 9 ಜನರು ಹತ್ತಿಗೂಡುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡಿದ್ದಾರೆ.
‘ಹುಚ್ಚ ನಾಯಿ ಕಡಿತಕ್ಕೆ ಒಳಗಾದ ಜನ, ಜಾನುವಾರುಗಳಿಗೆ ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಸೂಕ್ತ ಪರಿಹಾರ ನೀಡಬೇಕು. ಅಲ್ಲದೇ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು’ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನೆ ಸಂಚಾಲಕ ಶರಣರೆಡ್ಡಿ ಹತ್ತಿಗೂಡುರ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.