ಸುರಪುರ: ಗುಲಬರ್ಗಾ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಸ್ನಾತಕೋತ್ತರ ಪದವಿಯಲ್ಲಿ ನಗರದ ಮಾಧುರಿ ಲಕ್ಷ್ಮಣ ಮ್ಯಾಕಲ್ ಮೂರು ಚಿನ್ನದ ಪದಕ ಗಳಿಸಿದ್ದಾರೆ.
ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ನಡೆದ 40ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿನಿಗೆ ಪ್ರಶಸ್ತಿ ಪದಕ ನೀಡಿ ಗೌರವಿಸಲಾಗಿದೆ.
ರಂಗಂಪೇಟ ಡಾ. ಬಾಬಾ ಸಾಹೇಬ ಅಂಬೇಡ್ಕರ್ ವಿದ್ಯಾವರ್ಧಕ ಸಂಸ್ಥೆಯ ಮೈಲಾರಲಿಂಗೇಶ್ವರ ಸ್ನಾತಕೋತ್ತರ ಮಹಾವಿದ್ಯಾಲಯದ ಇತಿಹಾಸ ವಿಭಾಗದಲ್ಲಿ ಮಾಧುರಿ ಅಭ್ಯಾಸ ಮಾಡುತ್ತಿದ್ದಾರೆ. ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಭೀಮಣ್ಣ ಬಿಲ್ಲವ, ಪ್ರಾಚಾರ್ಯ ಡಾ. ಮಲ್ಲಿಕಾರ್ಜುನ ಕುಲಕರ್ಣಿ ಮತ್ತು ಬೋಧಕ ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.