ADVERTISEMENT

ಯಾದಗಿರಿ: ಮರೆಪ್ಪಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2020, 3:19 IST
Last Updated 3 ನವೆಂಬರ್ 2020, 3:19 IST
ಯಾದಗಿರಿಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಭಾಜನರಾದ ಮರೆಪ್ಪ ನಾಯಕ ಮಗ್ದಂಪುರ ಅವರನ್ನು ಜಿಲ್ಲಾಡಳಿತ ವತಿಯಿಂದ ಸನ್ಮಾನಿಸಲಾಯಿತು
ಯಾದಗಿರಿಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಭಾಜನರಾದ ಮರೆಪ್ಪ ನಾಯಕ ಮಗ್ದಂಪುರ ಅವರನ್ನು ಜಿಲ್ಲಾಡಳಿತ ವತಿಯಿಂದ ಸನ್ಮಾನಿಸಲಾಯಿತು   

ಯಾದಗಿರಿ: ವಾಲ್ಮೀಕಿ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಮರೆಪ್ಪ ನಾಯಕ ಮಗ್ದಂಪುರ ಅವರು ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಭಾಜನರಾಗಿದ್ದಾರೆ.

ಪ್ರಶಸ್ತಿಯು ₹5 ಲಕ್ಷ ನಗದು, 20 ಗ್ರಾಂ ಚಿನ್ನದ ಪದಕ, ಸ್ಮರಣಿಕೆ ಹೊಂದಿದೆ. ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಐವರನ್ನು ಈ ಸಾಲಿನಲ್ಲಿ ಆಯ್ಕೆ ಮಾಡಲಾಗಿದೆ.

ಇದರಲ್ಲಿ ಜಿಲ್ಲೆಯವರಾದ ಮರೆಪ್ಪ ನಾಯಕ ಅವರನ್ನು ಗುರುತಿಸಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೆಸರು ಘೋಷಣೆ ಮಾಡಿದ್ದಾರೆ.

ADVERTISEMENT

‘ಪರಿಶಿಷ್ಟ ವರ್ಗವನ್ನು ಉತ್ತಮವಾಗಿ ಸಂಘಟನೆ ಮಾಡಿದ್ದರಿಂದ ಸಂಘಟನೆ ವಿಭಾಗದಲ್ಲಿ ವಾಲ್ಮೀಕಿ ಪ್ರಶಸ್ತಿ ಲಭಿಸಿದೆ. ಇದು ಹೋರಾಟಕ್ಕೆ ಮತ್ತಷ್ಟು ಸ್ಫೂರ್ತಿ ನೀಡಿದೆ’ ಎಂದು ಮರೆಪ್ಪ ನಾಯಕ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.