ADVERTISEMENT

ಗಾಂಧಿ, ಶಾಸ್ತ್ರಿ ಆಶಯ ಈಡೇರಿಸಿ: ಯಾದಗಿರಿ ಜಿಲ್ಲಾಧಿಕಾರಿ ಡಾ.ಆರ್‌.ರಾಗಪ್ರಿಯಾ

ಮಹಾತ್ಮ ಗಾಂಧೀಜಿ, ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಸರಳ ಆಚರಣೆ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 14:40 IST
Last Updated 2 ಅಕ್ಟೋಬರ್ 2020, 14:40 IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು   

ಯಾದಗಿರಿ: ನಮ್ಮ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆ ಕಾಪಾಡುವುದು, ದೇವರಿಗೆ ಪ್ರಾರ್ಥನೆ ಮಾಡಿದಂತೆ ಎಂದು ಮಹಾತ್ಮ ಗಾಂಧೀಜಿ ಅಭಿಪ್ರಾಯವಾಗಿತ್ತು. ಇಂಥ ಸಂದೇಶವನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಭವ್ಯಭಾರತ ನಿರ್ಮಾಣ ಮಾಡುವಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್‌.ರಾಗಪ್ರಿಯಾ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಸುಮಾರು 70 ದಶಕಗಳ ಹಿಂದೆ ಅಹಿಂಸಾ ತತ್ವದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟರು. ಕೋವಿಡ್-19 ಸೋಂಕಿನ ವಿರುದ್ಧ ಹೋರಾಡಲು ನಾವೆಲ್ಲಾ ಸೇನಾನಿಗಳಾಗಬೇಕಾಗಿದೆ. ಹೀಗಾಗಿ ಪ್ರತಿಯೋಬ್ಬರೂ ಸ್ವಯಂ ಪ್ರೇರಿತರಾಗಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ, ಕಿರಾಣಿ ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಪಾಡಬೇಕು ಇದರಿಂದ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಸಾದ್ಯವಾಗುತ್ತದೆ ಎಂದು ಹೇಳಿದರು.

ADVERTISEMENT

ಮಾಸ್ಕ್ ಹಾಕಿಕೊಳ್ಳದೆ ಉಲ್ಲಂಘನೆ ಮಾಡಿದವರಿಗೆ ದಂಡವಿಧಿಸಲಾಗುವುದು ಎಂದು ನಗರಗಳಲ್ಲಿ ನಗರಸಭೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನರಿಗೆ ಅರಿವು ಮೂಡಿಸಬೇಕು. ಕೋವಿಡ್ ಸೋಂಕಿನ ಅಪಾಯದ ಕುರಿತು ಸಾರ್ವಜನಿಕರಲ್ಲಿ ತಿಳಿವಳಿಕೆ ಮೂಡಿಸಿ, ಕಡ್ಡಾಯವಾಗಿ ಮಸ್ಕ್ ಧರಿಸುವಂತೆ ಸೂಚಿಸಬೇಕು ಎಂದು ಹೇಳಿದರು.

ದೇಶದ ಮಾಜಿ ಪ್ರಧಾನಿಗಳಾಗಿದ್ದ ಲಾಲ್ ಬಹಾದ್ದೂರ್ ಶಾಸ್ತ್ರೀಜಿಯವರ ಜನ್ಮದಿನವೂ ಕೂಡ ಇಂದೇ ಆಗಿದೆ. ಅವರು ಪ್ರಧಾನಮಂತ್ರಿಗಳಾಗಿದ್ದರೂ ಸರಳತೆಯನ್ನು ಮೈಗೂಡಿಸಿಕೊಂಡಿದ್ದರು. ಅವರ ಆಡಳಿತಾವಧಿಯಲ್ಲಿ ಅನೇಕ ದೃಢ ನಿರ್ಧಾರಗಳನ್ನು ಕೈಗೊಂಡು ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ, ಉಪವಿಭಾಗಾಧಿಕಾರಿ ಶಂಕರಗೌಡ ಎಸ್. ಸೋಮನಾಳ, ವಿಕ್ರಮ್‍ಸಿಂಗ್ ಸೇರಿದಂತೆ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.