ADVERTISEMENT

ಸ್ಮಾರ್ಟ್ ಕ್ಲಾಸ್‌ ಸದುಪಯೋಗವಾಗಲಿ: ಸಚಿವ ಪ್ರಭು ಚವ್ಹಾಣ್

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2020, 16:10 IST
Last Updated 4 ಆಗಸ್ಟ್ 2020, 16:10 IST
ಯಾದಗಿರಿಯ ಸರ್ಕಾರಿ ಕನ್ಯಾ ಪ್ರೌಢಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್  ಉದ್ಘಾಟಿಸಿದರು
ಯಾದಗಿರಿಯ ಸರ್ಕಾರಿ ಕನ್ಯಾ ಪ್ರೌಢಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್  ಉದ್ಘಾಟಿಸಿದರು   

ಯಾದಗಿರಿ: ಭಾರತ್ ಎಲೆಕ್ಟ್ರಾನಿಕ್ಸ್ ಮತ್ತು ಸೆಲ್ಕೊ ಕಂಪನಿಯಿಂದ ಅಳವಡಿಸಿರುವ ಸ್ಮಾರ್ಟ್ ಕ್ಲಾಸ್ ಸದುಪಯೋಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್‌ ಹೇಳಿದರು.

ನಗರದ ಸರ್ಕಾರಿಕನ್ಯಾಪ್ರೌಢಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಬರುತ್ತದೆ. ಈಸ್ಮಾರ್ಟ್ ಕ್ಲಾಸ್ ಮೂಲಕ ಫಲಿತಾಂಶ ಹೆಚ್ಚಳಕ್ಕೆ ಪ್ರಯತ್ನಿಸಬೇಕು. ಜಿಲ್ಲೆಯ 122 ಶಾಲೆಗಳಲ್ಲಿಸ್ಮಾರ್ಟ್ ಕ್ಲಾಸ್ ಅಳವಡಿಸಿದ್ದು, ಶೈಕ್ಷಣಿಕ ವರ್ಷ ಆರಂಭವಾದ ಮೇಲೆ ಸದುಪಯೋಗವಾಗಲಿ ಎಂದರು.

ADVERTISEMENT

ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್, ಡಿಡಿ‍ಪಿಐ ಶ್ರೀನಿವಾಸ ರೆಡ್ಡಿ, ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸನಗೌಡ ಯಡಿಯಾಪುರ ಸೇರಿದಂತೆ ಹಲವರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.