ADVERTISEMENT

ಮಹಾತ್ವಕಾಂಕ್ಷಿ ಜಿಲ್ಲೆಯ ಕನಸು ನನಸು ಮಾಡಿ: ಜಿಲ್ಲಾಧಿಕಾರಿ ಹರ್ಷಲ್ ಭೋಯರ್

​ಪ್ರಜಾವಾಣಿ ವಾರ್ತೆ
Published 31 ಜುಲೈ 2025, 6:12 IST
Last Updated 31 ಜುಲೈ 2025, 6:12 IST
ಕೇಂದ್ರ ಸರ್ಕಾರದ ನೀತಿ ಆಯೋಗದ ಮಹತ್ವಾಕಾಂಕ್ಷಿ ಜಿಲ್ಲೆ ಮತ್ತು ಮಹತ್ವಾಕಾಂಕ್ಷಿ ಬ್ಲಾಕ್ ವಡಗೇರಾ ಯೋಜನೆಯಡಿ ಸಂಪೂರ್ಣ ಅಭಿಯಾನ ಸಮ್ಮಾನ ಸಮಾರೋಪ ಮತ್ತು ಆಕಾಂಕ್ಷ ಹಾಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾಧಕ ಅಧಿಕಾರಿ, ಸಿಬ್ಬಂದಿಗೆ ಪ್ರಮಾಣಪತ್ರ ವಿತರಿಸಿ ಗೌರವಿಸಲಾಯಿತು
ಕೇಂದ್ರ ಸರ್ಕಾರದ ನೀತಿ ಆಯೋಗದ ಮಹತ್ವಾಕಾಂಕ್ಷಿ ಜಿಲ್ಲೆ ಮತ್ತು ಮಹತ್ವಾಕಾಂಕ್ಷಿ ಬ್ಲಾಕ್ ವಡಗೇರಾ ಯೋಜನೆಯಡಿ ಸಂಪೂರ್ಣ ಅಭಿಯಾನ ಸಮ್ಮಾನ ಸಮಾರೋಪ ಮತ್ತು ಆಕಾಂಕ್ಷ ಹಾಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾಧಕ ಅಧಿಕಾರಿ, ಸಿಬ್ಬಂದಿಗೆ ಪ್ರಮಾಣಪತ್ರ ವಿತರಿಸಿ ಗೌರವಿಸಲಾಯಿತು   

ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸೇರಿದಂತೆ ಎಲ್ಲ ಇಲಾಖೆಗಳ ಹಿರಿಯ, ಕಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ, ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಸಹಕಾರದಿಂದ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಜಿಲ್ಲೆಯ ಕನಸು ನನಸು ಮಾಡಲು ಸಂಪೂರ್ಣವಾಗಿ ಶ್ರಮಿಸೋಣ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಹೇಳಿದರು.

ಕೇಂದ್ರ ಸರ್ಕಾರದ ನೀತಿ ಆಯೋಗದ ಮಹತ್ವಾಕಾಂಕ್ಷಿ ಜಿಲ್ಲೆ ಮತ್ತು ಮಹತ್ವಾಕಾಂಕ್ಷಿ ಬ್ಲಾಕ್ ವಡಗೇರಾ ಯೋಜನೆಯಡಿ ಸಂಪೂರ್ಣ ಅಭಿಯಾನ ಸಮ್ಮಾನ ಸಮಾರೋಪ ಮತ್ತು ಆಕಾಂಕ್ಷ ಹಾಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾಧಕ ಅಧಿಕಾರಿ, ಸಿಬ್ಬಂದಿಗೆ ಪ್ರಮಾಣಪತ್ರ ವಿತರಿಸಿ ಗೌರವಿಸಿ ಅವರು ಮಾತನಾಡಿದರು.

ಅಭಿವೃದ್ಧಿಗಾಗಿ ಸರ್ಕಾರ ನೀಡಿದ ಸೂಚಂಕ್ಯಗಳಲ್ಲಿ ಮಹತ್ವಾಕಾಂಕ್ಷಿ ಜಿಲ್ಲೆ ತನ್ನ ನಿಗದಿತ ಗುರಿ 6 ತಲುಪುವ ಮೂಲಕ ಗುರಿ ತಲುಪಿದರೆ, ವಡಗೇರಾ ಬ್ಲಾಕ್ ಆರಲ್ಲಿ ಐದು ಕೆಲಸಗಳನ್ನು ಮಾಡುವ ಮೂಲಕ ಹೆಚ್ಚಿನ‌ ಸಾಧನೆ ಮಾಡಿದೆ ಎಂದರು.

ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಅಭಿನಂದಿಸಿದ ಡಿಸಿ ಅವರು, ಮುಂದೆ ಕೂಡಾ ಇದೆ ರೀತಿ ಕೆಲಸ ಮಾಡುವಂತೆ ಸಲಹೆ ನೀಡಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಪಂ ಸಿಇಒ ಲವೀಶ್ ಒರಡಿಯಾ, ಈ ಸಾಧನೆಗೆ ಆಶಾ, ಅಂಗನವಾಡಿ ಕಾರ್ಯಕರ್ತರು, ಶಿಕ್ಷಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ತಾಲ್ಲೂಕು ಮಟ್ಟದ ಹಿರಿಯ ಅಧಿಕಾರಿಗಳು ಹಾಕಿದ ಶ್ರಮಕ್ಕೆ ಫಲ ಸಿಕ್ಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ನೀತಿ ಆಯೋಗದ ಆದೇಶದಂತೆ ಈ ಕಾರ್ಯಕ್ರಮ ಆಯೋಜಿಸಿ, ಗುರಿ ತಲುಪಲು ಶ್ರಮಿಸಿದ ತಳಮಟ್ಟದಿಂದ ಹಿರಿಯ ಅಧಿಕಾರಿಗಳನ್ನು ಗುರುತಿಸಿ ಪ್ರಮಾಣ ಪತ್ರ ನೀಡುವ ಮೂಲಕ ಗೌರವಿಸಲಾಗಿದೆ ಎಂದರು.

ಇನ್ನೂ ಹೆಚ್ಚಿನ ರೀತಿಯಲ್ಲಿ ನಾವೆಲ್ಲರೂ ಕೆಲಸ ಮಾಡುವ‌ ಮೂಲಕ ಕೇಂದ್ರ ಸರ್ಕಾರದ ಈ ಯೋಜನೆಯನ್ನು ಯಶಸ್ಸಿಯಾಗಿ ಮಾಡೋಣ ಎಂದರು.

ADVERTISEMENT

ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕೋಲಾರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಸಿಪಿಒ ಕುಮಲಯ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಇತರರಿದ್ದರು. ಅಧಿಕಾರಿ ರಿಯಾಜ್ ಪಟೇಲ್ ನಿರೂಪಿಸಿದರು.

ಡಿಸಿ ಹರ್ಷಲ್ ಭೋಯರ್ ಅವರು ಸಿರಿ ಮಳಿಗೆಯಲ್ಲಿ ಸೀರೆಯೊಂದು ಖರೀದಿಸಿದರು

ಸೀರೆ ಖರೀದಿಸಿದ ಡಿಸಿ !

ಮೂರು ದಿನಗಳವರೆಗೂ ಇರುವ ಆಕಾಂಕ್ಷಾ ಹಾಟ್‌ ನ ವಿವಿಧ ಮಳಿಗೆಗಳಿಗೆ ಚಾಲನೆ ನೀಡಿದ ಡಿಸಿ ಹರ್ಷಲ್ ಭೋಯರ್ ಅವರು ಸಿರಿ ಮಳಿಗೆ ಕಾಣುತ್ತಲೇ ಅಲ್ಲಿಗೆ ತೆರಳಿ ಸೀರೆಯೊಂದು ಖರೀದಿಸಿದರು. ಅದೇ ರೀತಿ ಪೆನ್ಸಿಲ್ ಇತರೆ ವಸ್ತುಗಳನ್ನು ಹಣ ನೀಡಿ ಖರೀದಿಸಿದ್ದು ಗಮನ ಸೆಳೆಯಿತು. ಈ ವೇಳೆ ಅಲ್ಲಿ ಹಾಕಲಾಗಿರುವ ವಿವಿಧ ವಸ್ತುಗಳ ಮಾರಾಟದ ಸುಮಾರು 15ಕ್ಕೂ ಹೆಚ್ಚು ಮಳಿಗೆಗಿಗೆ ಎಸ್ಪಿ ಪೃಥ್ವಿಕ್ ಶಂಕರ್ ಜಿಪಂ ಸಿಇಒ ಲವೀಶ್ ಒರಡಿಯಾ ಅವರ ಜೊತೆ ಭೇಟಿ ನೀಡಿದ ಡಿಸಿ ಅಲ್ಲಿನ ವಿವಿಧ ವಸ್ತುಗಳ ಬಗ್ಗೆ ತಿಳಿದುಕೊಂಡರು. ಮೂರು ದಿನಗಳ ಈ ಆಕಾಂಕ್ಷಾ ಹಾಟ್ ಸ್ಥಳಕ್ಕೆ ಜನರು ಹೆಚ್ಚಿಗೆ ಬಂದು ವಸ್ತುಗಳನ್ನು ಖರೀದಿಸಿ ವ್ಯಾಪಾರಕ್ಕೆ ಪ್ರೋತ್ಸಾಹ ನೀಡಬೇಕೆಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.