ADVERTISEMENT

₹ 60 ಸಾವಿರ ಮೌಲ್ಯದ ಗಾಂಜಾ ಜಪ್ತಿ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2019, 10:04 IST
Last Updated 3 ಡಿಸೆಂಬರ್ 2019, 10:04 IST
ಇಂಗಳಿಗಿ ಗ್ರಾಮದಲ್ಲಿ ಹತ್ತಿ ಬೆಳೆಯಲ್ಲಿ ಅಕ್ರಮವಾಗಿ ಬೆಳೆದ ₹60 ಸಾವಿರ ಮೌಲ್ಯದ ಗಾಂಜಾವನ್ನು ಪೊಲೀಸರು ಸೋಮವಾರ ಜಪ್ತಿ ಮಾಡಿಕೊಂಡಿದ್ದಾರೆ
ಇಂಗಳಿಗಿ ಗ್ರಾಮದಲ್ಲಿ ಹತ್ತಿ ಬೆಳೆಯಲ್ಲಿ ಅಕ್ರಮವಾಗಿ ಬೆಳೆದ ₹60 ಸಾವಿರ ಮೌಲ್ಯದ ಗಾಂಜಾವನ್ನು ಪೊಲೀಸರು ಸೋಮವಾರ ಜಪ್ತಿ ಮಾಡಿಕೊಂಡಿದ್ದಾರೆ   

ಶಹಾಪುರ: ತಾಲ್ಲೂಕಿನ ಇಂಗಳಿಗಿ ಗ್ರಾಮದಲ್ಲಿ ಸಿದ್ದಪ್ಪ ಭೀಮರಾಯ ಕಂದಕೂರ ಎಂಬ ರೈತ ಹತ್ತಿ ಹೊಲದಲ್ಲಿ ಅಕ್ರಮವಾಗಿ ಬೆಳೆದಿದ್ದ ₹60 ಸಾವಿರ ಮೌಲ್ಯದ ಗಾಂಜಾ ಗಿಡಗಳನ್ನು ಭೀಮರಾಯನಗುಡಿ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

ಅಂದಾಜು 20 ಕೆ.ಜಿ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಅಂದಾಜು ಮೌಲ್ಯ60 ಸಾವಿರ ಎಂದು ಪೊಲೀಸರು ತಿಳಿಸಿದರು. ಜಪ್ತಿ ಕಾಲಕ್ಕೆ ಶಹಾಪುರ ತಹಶೀಲ್ದಾರ್ ಜಗನಾಥರಡ್ಡಿ ಇದ್ದರು. ಭೀಮರಾಯನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT