ADVERTISEMENT

ಮಾಸ್ಕ್, ಸ್ಯಾನ್‍ಟೈಸರ್ ಹಸ್ತಾಂತರ

ಕೊರೊನಾ ವಿರುದ್ಧ ಹೋರಾಡುತ್ತಿರುವ ಸಿಬ್ಬಂದಿಗೆ ಸಹಾಯಹಸ್ತ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2020, 15:55 IST
Last Updated 7 ಏಪ್ರಿಲ್ 2020, 15:55 IST
10 ಸಾವಿರ ಮಾಸ್ಕ್ ಮತ್ತು 25 ಬಾಟಲ್ ಸ್ಯಾನಿಟೈಸರ್ ಅನ್ನು ಜೆಡಿಎಸ್‌ ಯುವ ಮುಖಂಡ ಶರಣಗೌಡ ಕಂದಕೂರ ಅವರು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಅವರಿಗೆ ಹಸ್ತಾಂತರಿಸಿದರು
10 ಸಾವಿರ ಮಾಸ್ಕ್ ಮತ್ತು 25 ಬಾಟಲ್ ಸ್ಯಾನಿಟೈಸರ್ ಅನ್ನು ಜೆಡಿಎಸ್‌ ಯುವ ಮುಖಂಡ ಶರಣಗೌಡ ಕಂದಕೂರ ಅವರು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಅವರಿಗೆ ಹಸ್ತಾಂತರಿಸಿದರು   

ಯಾದಗಿರಿ: ಜಿಲ್ಲೆಯಲ್ಲಿ ಕೊರೊನಾ ವೈರಸ್‍ ವಿರುದ್ಧ ಹೋರಾಡುತ್ತಿರುವ ವೈದ್ಯರು, ಅಧಿಕಾರಿ ಮತ್ತು ಸಿಬ್ಬಂದಿಗೆ ಅನುಕೂಲವಾಗುವಂತೆ 10 ಸಾವಿರ ಮಾಸ್ಕ್ ಮತ್ತು 25 ಬಾಟಲ್ ಸ್ಯಾನಿಟೈಸರ್ ಅನ್ನು ಜೆಡಿಎಸ್‌ ಯುವ ಮುಖಂಡ ಶರಣಗೌಡ ಕಂದಕೂರ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಅವರಿಗೆ ಹಸ್ತಾಂತರಿಸಿದರು.

ನಂತರ ಮಾತನಾಡಿದ ಅವರು, ವೈದ್ಯರು, ಶುಶ್ರೂಷಕಿಯರು ಕೊರೊನಾ ನಿಯಂತ್ರಣಕ್ಕಾಗಿ ಶ್ರಮಿಸುತ್ತಿದ್ದಾರೆ. ಇದರ ಜತೆಗೆ ಪೊಲೀಸರ ಕಾರ್ಯ ಶ್ಲಾಘನೀಯ. ಅವರಿಗೆ ಮಾಸ್ಕ್‌, ಸ್ಯಾನಿಟೈಸರ್‌ ಅವಶ್ಯವಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT