ಯಾದಗಿರಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ್ ಅವರು ಜಿಲ್ಲೆಗೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿದ್ದಾರೆ.
ಈ ಕುರಿತು ರಾಯಚೂರು ಸಂಸದ ರಾಜ ಅಮರೇಶ್ವರ ನಾಯಕ ಅವರಿಗೆ ನವೆಂಬರ್ 30 ರಂದು ಪತ್ರ ಬರೆದು ಮಂಜೂರು ಮಾಡಿರುವ ಬಗ್ಗೆ ತಿಳಿಸಿದ್ದಾರೆ.
ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿಜಿಲ್ಲೆಗೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ಜೂನ್ 21ರಂದು ಗ್ರಾಮ ವಾಸ್ತವ್ಯಕ್ಕೆ ಜಿಲ್ಲೆಗೆ ಆಗಮಿಸಿದ್ದ ಅಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿರದ್ದು ಮಾಡಿದ್ದರು. ಕಾಲೇಜು ಸ್ಥಳೀಯರಿಗಿಂತ ಬೇರೆಯವರಿಗೆ ಹೆಚ್ಚು ಉಪಯೋಗವಾಗುತ್ತದೆ ಎಂದು ಹೇಳಿದ್ದರು.ಇದರಿಂದ ವ್ಯಾಪಕವಾಗಿ ಪ್ರತಿಭಟನೆ ಟೀಕೆ ವ್ಯಕ್ತವಾಗಿತ್ತು. ಜುಲೈ 10 ರಂದು ಯಾದಗಿರಿ ಬಂದ್ ಆಗಿತ್ತು.
ಈ ಕುರಿತು ಸ್ಥಳೀಯ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಪ್ರತಿಕ್ರಿಯಿಸಿ ‘ಕೇಂದ್ರ ಸಚಿವರಿಗೆ ಜಿಲ್ಲೆಗೆ ಮೆಡಿಕಲ್ ಕಾಲೇಜು ಬಗ್ಗೆ ಮನವಿ ಮಾಡಿದ್ದೆ. ಈಗ ಮಂಜೂರು ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ’ ಇದೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.