ADVERTISEMENT

ಕೊರೊನಾ ತಡೆಗೆ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಸಭೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2020, 15:01 IST
Last Updated 11 ಏಪ್ರಿಲ್ 2020, 15:01 IST
ಕೋವಿಡ್-19 ತಡೆಗಟ್ಟಲು ತೆಗೆದುಕೊಂಡಿರುವ ಹಾಗೂ ತೆಗೆದುಕೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಶಿವನಗೌಡ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಸಭೆ ಜರುಗಿತು
ಕೋವಿಡ್-19 ತಡೆಗಟ್ಟಲು ತೆಗೆದುಕೊಂಡಿರುವ ಹಾಗೂ ತೆಗೆದುಕೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಶಿವನಗೌಡ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಸಭೆ ಜರುಗಿತು   

ಯಾದಗಿರಿ: ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್‍ಗಳ ಆದೇಶದ ಪ್ರಕಾರ ಜಿಲ್ಲೆಯಲ್ಲಿ ಕೋವಿಡ್-19 ತಡೆಗಟ್ಟಲು ತೆಗೆದುಕೊಂಡಿರುವ ಹಾಗೂ ತೆಗೆದುಕೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಿವನಗೌಡ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಸಭೆ ಜರುಗಿತು.

ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್‍ಗಳ ಆದೇಶಗಳ ಅನುಷ್ಠಾನದ ಬಗ್ಗೆ ಸವಿಸ್ತಾರವಾಗಿ ಚರ್ಚಿಸಲಾಯಿತು. ಜಿಲ್ಲೆಯಲ್ಲಿ ಕೋವಿಡ್-19 ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ತೀರ್ಮಾನಿಸಲಾಯಿತು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯನ್ಯಾಯಿಕ ದಂಡಾಧಿಕಾರಿ ನಾಮದೇವ ಕೆ.ಸಾಲಮಂಟಪಿ, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ್ ಅರ್ಜುನ ಬನಸೋಡೆ, ಸಿವಿಲ್ ನ್ಯಾಯಾಧೀಶ ಲೋಕೇಶ್ ಧನಪಾಲ್ ಹವಳೆ, ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.