ಯಾದಗಿರಿ: ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರಿ ಚಹಾ (ಬ್ಲಾಕ್ ಟಿ) ತಯಾರಿಸಿ ಕುಡಿಯುವ ಮೂಲಕ ವಿನೂತನ ಪ್ರತಿಭಟನೆ ಮಾಡಿದರು.
ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಕರಣಗಿ ಅವರ ನೇತೃತ್ವದಲ್ಲಿ ಗ್ಯಾಸ್ ಸ್ಟೌ ತಂದು ಬ್ಲಾಕ್ ಟಿ ತಯಾರಿಸಿ ಗಮನ ಸೆಳೆದರು.
ಈ ವೇಳೆ ಮಾತನಾಡಿದ ಮುಖಂಡರು, ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಮೇಲೆ ಬೆಲೆ ಏರಿಕೆ ಬರೆ ಎಳೆದಿದೆ. ಎಲ್ಲ ವಸ್ತುಗಳ ದರಗಳನ್ನು ಏರಿಸುವ ಮೂಲಕ ಜನರ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಸ್ವಾಮಿದೇವ ದಾಸನಕೇರಿ, ರಮೇಶ ದೊಡ್ಡಮನಿ, ವೆಂಕಟರೆಡ್ಡಿ ಅಬ್ಬೆತುಮಕೂರು, ಲಿಂಗಪ್ಪ ಹತ್ತಿಮನಿ, ಸುನೀತಾ ಚವಾಣ್, ವೀಣಾ ಮೋದಿ, ಭೀಮಾಬಾಯಿ ಸೆಂಡಗಿ, ಸ್ನೇಹಾ ರಸಾಳಕರ್, ಶಕುಂತಲಾ ಗುಲಾನೋರ್, ರಮಾದೇವಿ, ಮೌನೇಶ ಬೆಳಗೇರ, ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.