ADVERTISEMENT

ರೈತ ಮನೆ ಬಾಗಿಲಿಗೆ ಯೋಜನೆ: ಸಚಿವ ಆರ್.ಆಶೋಕ

‘ಜಿಲ್ಲಾಧಿಕಾರಿ ನಡೆ– ಹಳ್ಳಿ ಕಡೆ’ ಕಾರ್ಯಕ್ರಮದಲ್ಲಿ ಸಚಿವ ಆರ್.ಆಶೋಕ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2022, 5:16 IST
Last Updated 20 ಮಾರ್ಚ್ 2022, 5:16 IST
ದೇವತ್ಕಲ್ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ‘ಜಿಲ್ಲಾಧಿಕಾರಿ ನಡೆ– ಹಳ್ಳಿ ಕಡೆ’ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್.ಆಶೋಕ ಮಾತನಾಡಿದರು
ದೇವತ್ಕಲ್ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ‘ಜಿಲ್ಲಾಧಿಕಾರಿ ನಡೆ– ಹಳ್ಳಿ ಕಡೆ’ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್.ಆಶೋಕ ಮಾತನಾಡಿದರು   

ಹುಣಸಗಿ: ರಾಜ್ಯದಲ್ಲಿನ ರೈತರು ಸ್ವಾವಲಂಬಿಯಾಗಿ ಜೀವನ ನಡೆಸುವಂತಾಗಬೇಕು. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಯೋಜನೆಗಳನ್ನು ರೈತನ ಮನೆ ಬಾಗಿಲಿಗೆ ಕೊಂಡೊಯ್ಯವ ಮೂಲಕ ರಾಜ್ಯದಲ್ಲಿ ಹೊಸತನ ಆರಂಭಿಸಿದೆ ಎಂದು ಕಂದಾಯ ಸಚಿವ ಆರ್.ಆಶೋಕ ಹೇಳಿದರು.

ಸಮೀಪದ ದೇವತ್ಕಲ್ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ‘ಜಿಲ್ಲಾಧಿಕಾರಿ ನಡೆ– ಹಳ್ಳಿ ಕಡೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಈ ನೆಲಕ್ಕೆ ನೀರು ಕೊಡಲು ನಾವೆಲ್ಲ ಬಂದಿದ್ದೇವೆ. ಜಿಲ್ಲಾಧಿಕಾರಿ ತಹಶೀಲ್ದಾರ್‌ಕಚೇರಿಗೆ ಜನರುಅಲೆದಾಡುವುದುಬ್ರಿಟಿಷರ ಕಾಲದ ಪದ್ಧತಿಯಾಗಿತ್ತು. ಆದರೆ, ನಮ್ಮ ಸರ್ಕಾರ ಬಂದ ಮೇಲೆ ಜನರ ಬಳಿಗೆಯೇ ಜಿಲ್ಲಾಧಿಕಾರಿ ಕಳಿಸುವ ಮೂಲಕ ಜನರ ಕಷ್ಟ ಸುಖ ಅರಿಯಲು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಪ್ರಾರಂಭಿಸಿದ್ದೇವೆ. ಇದರಿಂದ ಸಾರ್ವಜನಿಕರ ಸಂಕಷ್ಟ ತಿಳಿಯಲು ಸರಕಾರಿಯಾಗಿದೆ. ಪರಿಣಾಮ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಜನರ ಮನೆ ಬಾಗಿಲಿಗೆ ಹೋಗುತ್ತಿದ್ದಾರೆ ಎಂದರು.

ADVERTISEMENT

ರಾಜ್ಯದ 60 ಲಕ್ಷ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ರೈತರ ದಾಖಲಾತಿಗಳನ್ನು ರೈತರ ಮನೆ ಬಾಗಿಲಿಗೆ ಮುಟ್ಟಿಸುವ ಕೆಲಸ ಮಾಡಲಾಗುತ್ತಿದೆ. ಅಲ್ಲದೇ ಇನಾಂ ಭೂಮಿಯನ್ನು ಉಳುವ ರೈತರಿಗೆ ನೀಡುವಂತಾಗಲು ಅದರ ಅರ್ಜಿ ಸಲ್ಲಿಕೆ ಅವಧಿಯನ್ನು ಇನ್ನೂ ಒಂದು ವರ್ಷ ವಿಸ್ತರಣೆ ಮಾಡುತ್ತಿರುವುದಾಗಿ ಪ್ರಕಟಿಸಿದರು.

ರಾಜ್ಯದಲ್ಲಿರುವ ನಮ್ಮ ಸರ್ಕಾರ ಬಡವರ, ರೈತರ ಪರವಾಗಿರುವ ಸರ್ಕಾವಾಗಿದ್ದು, ಬದುಕಿಗೆ ಭರವಸೆ ತರುವ ಸರ್ಕಾರವಾಗಿದೆ ಎಂದು ಹೇಳಿದರು.

ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ ಮಾತನಾಡಿ, ರಾಜ್ಯ ಸರ್ಕಾರ ಕೇಂದ್ರ ಸರ್ಕಾರದೊಂದಿಗೆ ಸಮನ್ವಯತೆ ಕಾಯ್ದಕೊಂಡು ರಾಜ್ಯಕ್ಕೆ ಹೆಚ್ಚಿನ ಅನುದಾನ ತರುವಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಅದರಲ್ಲಿಯೂ ನಿರಾವರಿ ಯೋಜನೆಯನ್ನು ಜಾರಿಗೊಳಿಸವಲ್ಲಿ ಹೆಚ್ಚು ಸಕ್ರಿಯವಾಗಿದೆ. ಆದರೆ, ಕೇಂದ್ರ ಸರ್ಕಾರದ ಸಹಯೋಗದಲ್ಲಿ ಅಳವಡಿಸಲಾಗುತ್ತಿರುವ ಗೇಟ್‌ಗಳ ಅವಳವಡಿಕೆ ಕೆಲಸ ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ ಎಂದು ಕೇಂದ್ರ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಸೈನಿಕ ಶಾಲೆ ಆರಂಭಿಸಲು ಶಾಸಕ ರಾಜೂಗೌಡ ಅವರು ಸ್ಥಳ ಗುರುತಿಸಿದ್ದು, ರಾಜ್ಯ ಸರ್ಕಾರ ಅಗತ್ಯ ದಾಖಲಾತಿಗಳೊಂದಿಗೆ ಕೇಂದ್ರ ಸರ್ಕಾರಕ್ಕೆ ಕಳಿಸಿಕೊಡುವಂತೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.