ಶಹಾಪುರ: ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಮಂಗವಾರ ನಗರದ ವಿವಿಧ ಬಡಾವಣೆ ಹಾಗೂ ಚಾಲನೆಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.
ಬೆಳಿಗ್ಗೆ ನಗರದ ಫಿಲ್ಟರ್ ಬೆಡ್ ಪ್ರದೇಶಕ್ಕೆ ಭೇಟಿ ಅಲ್ಲಿನ ಸಂಪರ್ಕ ರಸ್ತೆ ಉದ್ಘಾಟನೆ ಹಾಗೂ ಗಣೇಶ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ₹1 ಕೋಟಿ ವೆಚ್ಚದಲ್ಲಿ ಬುದ್ಧ ಮಂದಿರಕ್ಕೆ ತೆರಳುವ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು.
₹1.50ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮಾರುತಿ ದೇವಸ್ಥಾನ ಕಟ್ಟಡ ಕಾಮಗಾರಿ ಪರಿಶೀಲಿಸಿದರು. ಆದಷ್ಟು ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದರು. ಅಲ್ಲದೆ ಬಸವೇಶ್ವರ ವೃತ್ತದಿಂದ ಮೋಚಿಗಡ್ಡವರೆಗೆ ₹1.10ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಚರಂಡಿ ಕಾಮಗಾರಿ ಪರಿಶೀಲಿಸಿದರು.
ತಾಲ್ಲೂಕಿನ ದಿಗ್ಗಿ ಗ್ರಾಮದಲ್ಲಿ ಸೋಮವಾರ ಆಕಸ್ಮಿಕ ಬೆಂಕಿ ಅವಘಡದಿಂದ 11 ಕುರಿ ಅಸುನೀಗಿದ್ದು ಗ್ರಾಮದ ದೇವಿಂದ್ರಪ್ಪ ಮ್ಯಾಗಿನಮನಿ ಅವರ ಮನೆಗೆ ಮಂಗಳವಾರ ಸಚಿವ ಶರಣಬಸಪ್ಪ ದರ್ಶನಾಪುರ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.
ಸರ್ಕಾರದಿಂದ ತ್ವರಿತವಾಗಿ ಪರಿಹಾರ ಒದಗಿಸುವ ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.