
ಪ್ರಜಾವಾಣಿ ವಾರ್ತೆಬಂಧನ
(ಪ್ರಾತಿನಿಧಿಕ ಚಿತ್ರ)
ಕೆಂಭಾವಿ (ಯಾದಗಿರಿ ಜಿಲ್ಲೆ): ಅಕ್ಕನಿಗೆ ಮನೆ ಕೆಲಸದಲ್ಲಿ ನೆರವಾಗಲು ಬಂದಿದ್ದ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿ ಆಕೆಯ ಬಾವನನ್ನು (ಅಕ್ಕನ ಗಂಡ) ಕೆಂಭಾವಿ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಕೆಂಭಾವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಅಕ್ಕನಿಗೆ ಎರಡನೇ ಹೆರಿಗೆಯಾಗಿತ್ತು. ಆಕೆಗೆ ನೆರವಾಗಲು ಬಾಲಕಿಯನ್ನು ಆಕೆಯ ತಾಯಿ ಅಳಿಯನ ಮನೆಗೆ ಕಳುಹಿಸಿದ್ದರು. ಮನೆಯಲ್ಲಿ ಯಾರೂ ಇಲ್ಲದಾಗ ಮಾವ ಅತ್ಯಾಚಾರ ಎಸಗಿದ್ದ. ಯಾರಿಗೂ ಹೇಳದಂತೆ ಜೀವಬೆದರಿಕೆ ಹಾಕಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿದಾಗ ಗರ್ಭಿಣಿಯಾಗಿದ್ದು ಗೊತ್ತಾಗಿದೆ. ‘ಪ್ರಕರಣ ಕುರಿತು ವರದಿ ಸಲ್ಲಿಸುವಂತೆ ಅಧಿಕಾರಿಗೆ ಸೂಚಿಸಿದೆ’ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ತಿಳಿಸಿದ್ದಾರೆ.