ಶಹಾಪುರ (ಯಾದಗಿರಿ ಜಿಲ್ಲೆ): ತಾಲ್ಲೂಕಿನ ಗ್ರಾಮವೊಂದರಲ್ಲಿ ಹಿಟ್ಟಿನ ಗಿರಣಿಗೆ ಬೀಸಲು ಹೋಗಿದ್ದ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ.
‘ಅತ್ಯಾಚಾರವೆಸಗಿದ 30 ವಯಸ್ಸಿನ ವ್ಯಕ್ತಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
‘ಸೋಮವಾರ ಬಾಲಕಿ ಧಾನ್ಯ ಬೀಸಿಕೊಂಡು ಬರಲು ಹಿಟ್ಟಿನ ಗಿರಣಿಗೆ ಹೋಗಿದ್ದಳು. ಈ ವ್ಯಕ್ತಿ ಬಾಲಕಿಯನ್ನು ಗಿರಣಿಯ ಕೋಣೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಯಾರಿಗಾದರೂ ಹೇಳಿದರೆ ಹತ್ಯೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತ ಬಾಲಕಿಯ ತಂದೆ ದೂರು ನೀಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.