ADVERTISEMENT

ಯಾದಗಿರಿ: ರಸ್ತೆ, ಚರಂಡಿ ನಿರ್ಮಾಣಕ್ಕೆ ಶಾಸಕ ವೆಂಕಟರೆಡ್ಡಿ ಮುದ್ನಾಳ ಶಂಕುಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2020, 17:13 IST
Last Updated 26 ಜೂನ್ 2020, 17:13 IST
₹1.25 ಕೋಟಿ ವೆಚ್ಚದ ರಸ್ತೆ ಮತ್ತು ಚರಂಡಿ ಹಾಗೂ ಪುಟಪಾತ್ ನಿರ್ಮಾಣ ಕಾಮಗಾರಿಗೆ ಶಾಸಕ ವೆಂಕಟರೆಡ್ಡಿ ಮುದ್ನಾಳ ಶುಕ್ರವಾರ ಪೂಜೆ ಸಲ್ಲಿಸಿದರು
₹1.25 ಕೋಟಿ ವೆಚ್ಚದ ರಸ್ತೆ ಮತ್ತು ಚರಂಡಿ ಹಾಗೂ ಪುಟಪಾತ್ ನಿರ್ಮಾಣ ಕಾಮಗಾರಿಗೆ ಶಾಸಕ ವೆಂಕಟರೆಡ್ಡಿ ಮುದ್ನಾಳ ಶುಕ್ರವಾರ ಪೂಜೆ ಸಲ್ಲಿಸಿದರು   

ಯಾದಗಿರಿ: ನಗರದ ಶಾಸ್ತ್ರಿ ವೃತ್ತದಿಂದ ರೈಲ್ವೆ ನಿಲ್ದಾಣದವರೆಗೆ 2019-20 ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿ ಮ್ಯಾಕ್ರೋ ಯೋಜನೆಯಡಿಯಲ್ಲಿ ₹1.25 ಕೋಟಿ ವೆಚ್ಚದ ರಸ್ತೆ ಮತ್ತು ಚರಂಡಿ ಹಾಗೂ ಫುಟ್‌ಪಾತ್ ನಿರ್ಮಾಣ ಕಾಮಗಾರಿಗೆ ಶಾಸಕ ವೆಂಕಟರೆಡ್ಡಿ ಮುದ್ನಾಳ ಶುಕ್ರವಾರ ಪೂಜೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಶಾಸಕ ಮುದ್ನಾಳ, ಈ ರಸ್ತೆ ಜನನಿಬಿಡದಿಂದ ಕೂಡಿದೆ. ಮೊದಲು ರಸ್ತೆ ಅಗಲೀಕರಣ ಪೂರ್ಣಗೊಳಿಸಬೇಕು. ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಆ ಕೆಲಸ ಪೂರ್ಣಗೊಂಡ ಬಳಿಕ ಗುತ್ತಿಗೆದಾರರು ಗುಣಮಟ್ಟದಿಂದ ಈ ಕಾಮಗಾರಿ ಕೈಗೊಳ್ಳಬೇಕು ಎಂದು ಸೂಚಿಸಿದರು.

ಗಾಂಧಿ ವೃತ್ತದಲ್ಲಿ ವರ್ತುಲ ರಸ್ತೆಗೆ ಅಡಿಗಲ್ಲು: ನಗರದ ಕೇಂದ್ರ ಬಿಂದು ಗಾಂಧಿವೃತ್ತದಲ್ಲಿ 2019-20 ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿ ಮ್ಯಾಕ್ರೋ ಯೋಜನೆ ಅಡಿಯಲ್ಲಿ ₹21 ಲಕ್ಷ ವೆಚ್ಚದಲ್ಲಿ ವರ್ತುಲ ರಸ್ತೆ ಅಭಿವೃದ್ಧಿ, ಸಂಚಾರ ವ್ಯವಸ್ಥೆ ಹಾಗೂ ಫುಟ್‌ಪಾತ್ ನಿರ್ಮಾಣ ಕಾಮಗಾರಿಗೆ ಶಾಸಕ ವೆಂಕಟರೆಡ್ಡಿ ಮುದ್ನಾಳ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿದರು.

ADVERTISEMENT

ನಗರದಲ್ಲಿಯೇ ಗಾಂಧಿವೃತ್ತ ಪ್ರಮುಖ ವ್ಯಾಪಾರ ವಹಿವಾಟುಗಳ ಕೇಂದ್ರ ಸ್ಥಳವಾಗಿದೆ. ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಯನ್ನು ಪ್ರಾಮಾಣಿಕವಾಗಿ ಕೈಗೊಳ್ಳಬೇಕು ಆಗ ಮಾತ್ರ ಜನರಿಗೆ ಉಪಯೋಗವಾಗುತ್ತದೆ ಎಂದು ಹೇಳಿದರು.

ಈ ವೇಳೆ ನಗರಸಭೆ ಸದಸ್ಯರಾದ ಲಲಿತಾ ಅನಪುರ, ಸುರೇಶ ಮಡ್ಡಿ, ವಿಲಾಸ ಪಾಟೀಲ, ಸ್ವಾಮಿದೇವ ದಾಸನಕೇರಿ, ಚಂದ್ರಕಾಂತ ಮಡ್ಡಿ, ಹಣಮಂತ ಇಟಗಿ, ಅಯ್ಯಣ್ಣ ಹುಂಡೇಕಾರ್, ಗುಂಡೇರಾವ ಪಂಚೆಂದ್ರಿ, ಮಂಜು ದಾಸನಕೇರಿ, ಬಸವರಾಜ ಚಂಡ್ರಕಿ, ರಮೇಶ ದೊಡ್ಮನಿ, ಮಶಪ್ಪ, ಸುರೇಶ ಅಂಬಿಗೇರ, ಬಸವರಾಜಪ್ಪಗೌಡ ಮುಷ್ಟೂರ, ಸೂಗಪ್ಪ ಬೆಳಗೇರಿ, ಅಧಿಕಾರಿಗಳಾದ ಸಿ.ಎಂ.ಪಾಟೀಲ, ವಿಶ್ವನಾಥರೆಡ್ಡಿ ನಾಯ್ಕಲ್, ಬಕ್ಕಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.