ADVERTISEMENT

ನೆರೆ ಸಂತ್ರಸ್ತರಿಗೆ ತಕ್ಷಣ ಪರಿಹಾರ ಒದಗಿಸಲು ಶಾಸಕ ನಾಗನಗೌಡ ಕಂದಕೂರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2020, 16:41 IST
Last Updated 22 ಅಕ್ಟೋಬರ್ 2020, 16:41 IST
ಗುರುಮಠಕಲ್‌ ಮತ ಕ್ಷೇತ್ರದ ವ್ಯಾಪ್ತಿಯ ಪ್ರವಾಹ ಪೀಡಿತ ಗ್ರಾಮಗಳಿಗೆ ಶಾಸಕ ನಾಗನಗೌಡ ಕಂದಕೂರ ಭೇಟಿ ನೀಡಿ ಪರಿಶೀಲಿಸಿದರು
ಗುರುಮಠಕಲ್‌ ಮತ ಕ್ಷೇತ್ರದ ವ್ಯಾಪ್ತಿಯ ಪ್ರವಾಹ ಪೀಡಿತ ಗ್ರಾಮಗಳಿಗೆ ಶಾಸಕ ನಾಗನಗೌಡ ಕಂದಕೂರ ಭೇಟಿ ನೀಡಿ ಪರಿಶೀಲಿಸಿದರು   

ಯಾದಗಿರಿ: ಗುರುಮಠಕಲ್‌ ಮತ ಕ್ಷೇತ್ರದ ವ್ಯಾಪ್ತಿಯ ಲಿಂಗೇರಿ, ಕೌಳೂರು, ಸಾವೂರ ಮತ್ತು ಮಲ್ಹಾರ ಪ್ರವಾಹ ಪೀಡಿತ ಗ್ರಾಮಗಳಿಗೆ ಶಾಸಕ ನಾಗನಗೌಡ ಕಂದಕೂರ ಭೇಟಿ ನೀಡಿ ಪರಿಶೀಲಿಸಿದರು.

ಅತಿವೃಷ್ಟಿ ಆಗಿರುವ ಬೆಳೆಹಾನಿ, ಪ್ರವಾಹದಿಂದ ಹಾನಿಯಾಗಿರುವ ಬೆಳೆ, ಕೊಚ್ಚಿಕೊಂಡು ಹೋದ ರಸ್ತೆಗಳು ಹಾಗೂ ಸೇತುವೆ ವೀಕ್ಷಿಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಸೂಚನೆ ನೀಡಿದರು.

‘ಕ್ಷೇತ್ರದಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಮನೆ, ದವಸ ಧಾನ್ಯಗಳು ನೀರು ಪಾಲಾಗಿದೆ. ಮನೆಗಳಿಗೆ ನೀರು ನುಗ್ಗಿದ್ದರಿಂದ ಹಾಗೂ ಬೆಳೆಗಳೆಲ್ಲ ಸಂಪೂರ್ಣ ನಾಶವಾಗಿವೆ. ಅಧಿಕಾರಿಗಳು ತಕ್ಷಣ ಸಂತ್ರಸ್ತರಿಗೆ ಪರಿಹಾರ ಒದಗಿಸಿಕೊಡಬೇಕು’ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ADVERTISEMENT

ಈ ವೇಳೆ ತಹಶೀಲ್ದಾರ್‌ ಚನ್ನಮಲ್ಲಪ್ಪ ಘಂಟಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಶ್ವೇತಾ ತಾಳೆಮರದ, ಶಿವುಗೌಡ, ಮಲ್ಲನಗೌಡ ಕೌಳೂರು, ಮಹಿಪಾಲರೆಡ್ಡಿ ಮಲ್ಹಾರ, ಶರಣಗೌಡ, ವೆಂಕಟರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.