ADVERTISEMENT

53 ಯಂತ್ರಚಾಲಿತ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮುದ್ನಾಳ

‘ಅಂಗವಿಕಲರಿಗೆ ಪ್ರೋತ್ಸಾಹ ಅಗತ್ಯ’

​ಪ್ರಜಾವಾಣಿ ವಾರ್ತೆ
Published 21 ಜೂನ್ 2021, 16:16 IST
Last Updated 21 ಜೂನ್ 2021, 16:16 IST
ಶಾಸಕ ವೆಂಕಟರಡ್ಡಿ ಮುದ್ನಾಳ ಕಚೇರಿಯಲ್ಲಿ ಅಂಗವಿಕಲರಿಗೆ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ 53 ಯಂತ್ರಚಾಲಿತ ತ್ರಿಚಕ್ರ ವಾಹನಗಳನ್ನು ವಿತರಿಸಿದರು
ಶಾಸಕ ವೆಂಕಟರಡ್ಡಿ ಮುದ್ನಾಳ ಕಚೇರಿಯಲ್ಲಿ ಅಂಗವಿಕಲರಿಗೆ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ 53 ಯಂತ್ರಚಾಲಿತ ತ್ರಿಚಕ್ರ ವಾಹನಗಳನ್ನು ವಿತರಿಸಿದರು   

ಯಾದಗಿರಿ: ಅಂಗವೈಕಲ್ಯದೇಹಕ್ಕೆಹೊರತು ಮನಸ್ಸಿಗಲ್ಲ, ಎಲ್ಲರಂತೆ ಅಂಗವಿಕಲರು ಸರಿಸಮಾನರು. ಸರಿಯಾದ ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಿದರೆ ಅಂಗವಿಕಲರು ಉತ್ತಮ ಸಾಧನೆ ಮಾಡಬಲ್ಲರು ಎಂದು ಯಾದಗಿರಿ ಶಾಸಕ ವೆಂಕಟರಡ್ಡಿ ಮುದ್ನಾಳ ಅಭಿಪ್ರಾಯಪಟ್ಟರು.

ನಗರದ ಶಾಸಕರ ಕಚೇರಿಯಲ್ಲಿ ಸೋಮವಾರ ಅಂಗವಿಕಲರಿಗೆ ಸ್ಥಳಿಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ 53 ಯಂತ್ರಚಾಲಿತ ತ್ರಿಚಕ್ರ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು.

ತ್ರಿಚಕ್ರ ವಾಹನ ಸರಿಯಾಗಿ ಸದ್ಬಳಕೆಯಾಗಲಿ, ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ವಿಕಲಚೇತನರ ಫಲಾನುಭವಿಗಳಿಗೆ ಕಿವಿಮಾತು ಹೇಳಿದರು.

ADVERTISEMENT

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಬಿ.ವಿ. ದೀಪಿಕಾ ಸೇರಿದಂತೆ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.