ADVERTISEMENT

ಬೆಳಗಾವಿ ಅಧಿವೇಶನದ ಭತ್ಯೆ ಸ್ವೀಕರಿಸಲ್ಲ: ಶಾಸಕ ಶರಣಗೌಡ ಕಂದಕೂರ್

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2025, 6:20 IST
Last Updated 12 ನವೆಂಬರ್ 2025, 6:20 IST
ಶರಣಗೌಡ ಕಂದಕೂರ್
ಶರಣಗೌಡ ಕಂದಕೂರ್   

ಯಾದಗಿರಿ: ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಯಾವುದೇ ತರಹದ ಭತ್ಯೆಯನ್ನು ಸ್ವೀಕರಿಸದಿರಲು ನಿರ್ಧಾರಿಸಿದ್ದೇನೆ ಎಂದು ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕ ಶರಣಗೌಡ ಕಂದಕೂರ್ ಅವರು ವಿಧಾನಸಭಾಧ್ಯಕ್ಷರಿಗೆ ಮಂಗಳವಾರ ಪತ್ರ ಬರೆದಿದ್ದಾರೆ.

‘ಅಧಿವೇಶನದಲ್ಲಿ ಭಾಗವಹಿಸಿದಾಗ ಸರ್ಕಾರ ನೀಡುವ ಟಿಎ, ಡಿಎ, ವಸತಿ ವ್ಯವಸ್ಥೆ ಪಡೆಯುವುದಿಲ್ಲ. ಕಲಾಪದ ವೇಳೆ ಚಹಾ, ಉ‍ಪಾಹಾರ, ಊಟವೂ ಮಾಡದೆ ಹೊರಗಿನಿಂದ ತರಿಸಿಕೊಳ್ಳುತ್ತೇನೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಉತ್ತರ ಕರ್ನಾಟಕದ ಸಮಸ್ಯೆಗೆ ಧ್ವನಿಯಾಗಲು ಬೆಳಗಾವಿಯ ಅಧಿವೇಶನಕ್ಕೆ ಪ್ರತಿ ವರ್ಷ ಸುಮಾರು ₹30 ಕೋಟಿ ವೆಚ್ಚವಾಗುತ್ತಿದೆ. ಇದರಿಂದ ಉತ್ತರ ಹಾಗೂ ಕಲ್ಯಾಣ ಕರ್ನಾಟಕ ಭಾಗಕ್ಕೆ ಯಾವುದೇ ಪ್ರಯೋಜನ ಆಗಿಲ್ಲ. ಕಳೆದ ಅಧಿವೇಶನಗಳಲ್ಲಿ ನಡೆದ ಚರ್ಚೆಗಳ ಕುರಿತು ಸರ್ಕಾರ ತೆಗೆದುಕೊಂಡ ನಿರ್ಧಾರಗಳ ಬಗ್ಗೆಯೂ ಇದುವರೆಗೂ ಜನರಿಗೆ ತಿಳಿಸಿಲ್ಲ ಎಂದಿದ್ದಾರೆ.

ADVERTISEMENT

ಉತ್ತರ ಕರ್ನಾಟಕ ಭಾಗದ ರೈತರು, ಬಡವರು, ಕಾರ್ಮಿಕರು ಮತ್ತು ಜನ ಸಾಮಾನ್ಯರು ಹಲವು ಜ್ವಲಂತ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅಭಿವೃದ್ಧಿ, ಅನುದಾನದ ಭರವಸೆ ಇರಿಸಿಕೊಂಡಿದ್ದಾರೆ. ಅಧಿವೇಶನದಲ್ಲಿ ಮಾತನಾಡಿ ಕಾಡಿ, ಬೇಡಿ ಹೋಗುವುದೇ ಆಗುತ್ತಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.