ADVERTISEMENT

ಮೊಬೈಲ್ ಕಳವು; ಇಬ್ಬರ ಬಂಧನ, ₹2 ಲಕ್ಷ ಮೌಲ್ಯದ ಮೊಬೈಲ್‌ಗಳು ವಶ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2021, 4:01 IST
Last Updated 18 ಆಗಸ್ಟ್ 2021, 4:01 IST
ಮೊಬೈಲ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳಿಂದ ಪೊಲೀಸರು ವಶಪಡಿಸಿಕೊಂಡಿರುವ ಮೊಬೈಲ್‌ಗಳು
ಮೊಬೈಲ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳಿಂದ ಪೊಲೀಸರು ವಶಪಡಿಸಿಕೊಂಡಿರುವ ಮೊಬೈಲ್‌ಗಳು   

ಯಾದಗಿರಿ: ಮೊಬೈಲ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ ₹ 2 ಲಕ್ಷ ಮೌಲ್ಯದ 40 ಮೊಬೈಲ್ ಫೋನ್‌ಗಳು, ಒಂದು ಕಾರು ವಶಕ್ಕೆ ಪಡೆದಿದ್ದಾರೆ.

ತೆಲಂಗಾಣದ ಆನಂದ, ಮೈಸೂರಿನ ಅಶ್ವಿನಿ ಬಂಧಿತರು. ನಗರದ ಹಳೆ ಬಸ್‌ ನಿಲ್ದಾಣದಲ್ಲಿ ಸಂಶಯಾಸ್ಪದವಾಗಿ ಮಾರುತಿ ಕಾರಿನಲ್ಲಿ ತಿರುಗಾಡುತ್ತಿದ್ದ ಆರೋಪಿಗಳನ್ನು ನಗರ ಪೊಲೀಸ್‌ ಠಾಣೆಯ ಪಿಎಸ್ಐ ವೀರಣ್ಣ ಹಾಗೂ ಸಿಬ್ಬಂದಿ ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

‘ಆರೋಪಿಗಳು ಯಾದಗಿರಿ, ಬಾಗಲಕೋಟೆ, ಬಳ್ಳಾರಿ, ಸವದತ್ತಿ ಸೇರಿದಂತೆ ವಿವಿಧ ಕಡೆ ಕಳವು ಮಾಡುತ್ತಿದ್ದರು. ಕಾರಿನ ಬಾಗಿಲು ಬಳಿಯ ಸ್ಕ್ರೂ ತೆಗೆದು ಕಳವು ಮಾಡಿದ್ದ ಮೊಬೈಲ್‌ಗಳನ್ನು ಅಲ್ಲಿ ಸಂಗ್ರಹಿಸಿ ಹೈದರಾಬಾದ್‌ನಲ್ಲಿ ಮಾರಾಟ ಮಾಡುತ್ತಿದ್ದರು. ಜನಸಂದಣಿ ಸ್ಥಳದಲ್ಲಿ ಸಣ್ಣ ಮಕ್ಕಳನ್ನುಬಳಸಿಕೊಂಡು ಮೊಬೈಲ್ ಕಳ್ಳತನ ಮಾಡಿಸುತ್ತಿದ್ದರು. ನಂತರ ₹500, ₹1,000 ನೀಡುತ್ತಿದ್ದರು’ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

ADVERTISEMENT

ಇಬ್ಬರ ವಿರುದ್ಧ ಯಾದಗಿರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.