ಹುಣಸಗಿ (ಯಾದಗಿರಿ ಜಿಲ್ಲೆ): ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದ ಮುಖ್ಯ ಗೇಟ್‌ಗೆ ಪೂಜೆ ಸಲ್ಲಿಸಿ ಭಾನುವಾರ ಕೃಷ್ಣಾ ನದಿಗೆ ನೀರು ಹರಿಸಲಾಯಿತು.
ಡ್ಯಾಂಗೆ 40,000 ಒಳಹರಿವು ಇದ್ದು, 4 ಗೇಟ್ ಮೂಲಕ ನದಿಗೆ 22,860 ಕ್ಯುಸೆಕ್ ನೀರು ಹರಿಸಲಾಗುತ್ತಿದೆ.
ಈ ಸಂದರ್ಭದಲ್ಲಿ ಸುರಪುರ ಶಾಸಕ ರಾಜೂಗೌಡ ಮಾತನಾಡಿ, ಯಾದಗಿರಿ, ರಾಯಚೂರು, ಕಲಬುರ್ಗಿ, ವಿಜಯಪುರ ಜಿಲ್ಲೆಗಳ ರೈತರ ಜೀವನಾಡಿಯಾಗಿರುವ ಕೃಷ್ಣೆಯನ್ನು ನೆನೆದು ಊಟ ಮಾಡುವುದನ್ನು ಮರೆಯುವಂತಿಲ್ಲ ಎಂದರು.
ಮಹಾರಾಷ್ಟ್ರ ನದಿ ಪಾತ್ರದಲ್ಲಿ ಮಳೆ ಆಗುತ್ತಿದ್ದು, ಲಾಲ್ ಬಹಾದ್ದೂರ್ ಶಾಸ್ತ್ರಿ ಆಲಮಟ್ಟಿ ಆಣೆಕಟ್ಟಿನಿಂದ ನಾರಾಯಣಪುರ ಜಲಾಶಯಕ್ಕೆ ನೀರು ಹರಿಸುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬರುತ್ತಿದೆ. ಇದರಿಂದ ಕೃಷ್ಣಾ ನದಿಗೆ ನೀರು ಹರಿಸಲಾಗುತ್ತಿದೆ.
ಮುಖ್ಯ ಎಂಜಿನಿಯರ್ ಎಸ್.ರಂಗಾರಾಂ, ಇಇ ಶಂಕರ ನಾಯ್ಕೊಡಿ ಮತ್ತಿತರರ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.