ADVERTISEMENT

ಕೃಷ್ಣಾ ನದಿ ಪಾತ್ರದ ಹಳ್ಳಿಗಳಲ್ಲಿ ಸಾರ್ವಜನಿಕರಿಗೆ ಜಾಗೃತಿ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2022, 7:14 IST
Last Updated 9 ಆಗಸ್ಟ್ 2022, 7:14 IST
ಕೃಷ್ಣಾ ನದಿಗೆ ನೀರು ಹರಿಸುತ್ತಿರುವ ದೃಶ್ಯ
ಕೃಷ್ಣಾ ನದಿಗೆ ನೀರು ಹರಿಸುತ್ತಿರುವ ದೃಶ್ಯ   

ಯಾದಗಿರಿ: ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ 1.20 ಲಕ್ಷ ಕ್ಯುಸೆಕ್ ನೀರು ಕೃಷ್ಣಾ ನದಿಗೆ ಹರಿಸಲಾಗುತ್ತಿದ್ದು, ನದಿ ಪಾತ್ರದ ಹಳ್ಳಿಗಳಲ್ಲಿ ಸಾರ್ವಜನಿಕರಿಗೆ ಪೊಲೀಸರು ಜಾಗೃತಿ ಮೂಡಿಸಿದರು.

ಹುಣಸಗಿ ತಾಲ್ಲೂಕಿನ ಕೊಡೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾ ನದಿ ಪಾತ್ರದ ಹಳ್ಳಿಗಳಲ್ಲಿ ಸಾರ್ವಜನಿಕರಿಗೆ ನಾರಾಯಣಪುರ ಡ್ಯಾಂ ನಿಂದ ಮಂಗಳವಾರ ಮಧ್ಯಾಹ್ನ 12 ಗಂಟೆಯಿಂದ 1.50 ಲಕ್ಷ ಕ್ಯುಸೆಕ್‌ಗಿಂತ ಅಧಿಕ ನೀರು ಬಿಡುತ್ತಿದ್ದು, ಸಾರ್ವಜನಿಕರು ಮತ್ತು ಜಾನುವಾರುಗಳು ನದಿಯ ಸಮೀಪ ಹೋಗದಂತೆ ಡಂಗೂರ ಬಾರಿಸಿದರು.

ಸ್ವಚ್ಛತಾ ವಾಹಿನಿ‌ ವಾಹನದ ಮೂಲಕ ಮೈಕ್‌ನಲ್ಲಿ ಎಚ್ಚರಿಕೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.