
ಶಹಾಪುರ: ‘ನಗರದ ಹಳೆ ತಹಶೀಲ್ದಾರ್ ಕಚೇರಿ ಆವರಣದಲ್ಲಿ ₹ 20ಕೋಟಿ ವೆಚ್ಚದಲ್ಲಿ ತಾಯಿ ಮಗು ಆಸ್ಪತ್ರೆ ನಿರ್ಮಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದರು.
ಇಲ್ಲಿನ ಹಳೆ ತಹಶೀಲ್ದಾರ್ ಕಚೇರಿ ಆವರಣಕ್ಕೆ ಶನಿವಾರ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲ್ಯಾಣ ಕರ್ನಾಟಕ ಭಾಗಕ್ಕೆ ಘೋಷಿಸಲಾದ ₹ 540ಕೋಟಿ ವೆಚ್ಚದ ಕಾಮಗಾರಿಗಳಲ್ಲಿ ಇದು ಒಂದಾಗಿದೆ. ಆಸ್ಪತ್ರೆಯ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಶೀಘ್ರದಲ್ಲಿಯೇ ಕಾಮಗಾರಿಗೆ ಚಾಲನೆ ನೀಡಲಾಗುವುದು’ ಎಂದರು.
‘ಕೆಲವರು ಸೌಲಭ್ಯವನ್ನು ಅರಸಿ ಚಿಕಿತ್ಸೆಗಾಗಿ ಬೇರಡೆ ಹೋಗುವ ಕಾರಣಗಳನ್ನು ಸರಿ ಪಡಿಸಲು ತಾಯಿ ಮತ್ತು ಮಗುವಿನ ಆಸ್ಪತ್ರೆಯನ್ನು ಒಂದೆಡೆ ನಿರ್ಮಿಸಲಾಗುತ್ತಿದೆ. ಆಸ್ಪತ್ರೆಯು ಸುಮಾರು 80*70ಚದರ ಮೀಟರ್ ಅಳತೆಯಲ್ಲಿ ನಿರ್ಮಿಸಲಾಗುತ್ತದೆ. ಸಕಲ ರೀತಿಯಲ್ಲಿ ಆಧುನಿಕ ಯಂತ್ರೋಪಕರಣಗಳ ಸೌಲಭ್ಯವನ್ನು ಹೊಂದಿರಲಿದೆ’ ಎಂದು ತಿಳಿಸಿದರು.
ಆರೋಗ್ಯ ಇಲಾಖೆಯ ಎಇಇ ಲಕ್ಷ್ಮೀ ನಾರಯಣರೆಡ್ಡಿ, ತಾಲ್ಲೂಕು ವೈದ್ಯಾಧಿಕಾರಿ ಡಾ.ರಮೇಶ ಗುತ್ತೇದಾರ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.