ADVERTISEMENT

11 ವರ್ಷದ ಮಗಳ ಕೊಂದ ತಾಯಿ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2026, 7:39 IST
Last Updated 10 ಫೆಬ್ರುವರಿ 2026, 7:39 IST
<div class="paragraphs"><p>ಸಾವು (ಸಾಂದರ್ಭಿಕ ಚಿತ್ರ)</p></div>

ಸಾವು (ಸಾಂದರ್ಭಿಕ ಚಿತ್ರ)

   

ಗೆಟ್ಟಿ ಚಿತ್ರ

ಯಾದಗಿರಿ: ಇಲ್ಲಿನ ರಾಜೀವ ಗಾಂಧಿ ನಗರದಲ್ಲಿ ಸೋಮವಾರ ತಾಯಿಯೇ ತನ್ನ 11 ವರ್ಷದ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ.

ADVERTISEMENT

ಪ್ರತಿಭಾ ಮಲ್ಲಯ್ಯ ಕೊಲೆಯಾದ ಬಾಲಕಿ. ಆಕೆಯ ತಾಯಿ ನಿರ್ಮಲಾಳನ್ನು ವಶಕ್ಕೆ ಪಡೆಯಲಾಗಿದೆ. ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿರ್ಮಲಾಗೆ ಮದ್ಯ ಸೇವಿಸುವ ಚಟವಿತ್ತು. ಮಧ್ಯಾಹ್ನ ಮದ್ಯ ಕುಡಿದು ಮನೆಗೆ ಬಂದ ತಾಯಿಯನ್ನು ಪ್ರತಿಭಾ ಪ್ರಶ್ನಿಸಿದಳು. ಇದರಿಂದ ತಾಯಿ– ಮಗಳ ನಡುವೆ ಜಗಳವಾಗಿದೆ. ಕೋಪಗೊಂಡ ನಿರ್ಮಲಾ ಮಗಳ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

‘ಮಗಳನ್ನು ಕೊಲೆಗೈದ ತಾಯಿ, ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಬಿಂಬಿಸಲು ಯತ್ನಿಸಿದ್ದಳು. ಬಾಲಕಿ ಕುತ್ತಿಗೆಯಲ್ಲಿ ಬೆರಳಿನ ಗುರುತ್ತುಗಳಿದ್ದು, ಕುಡಿದ ಮತ್ತಿನಲ್ಲಿದ್ದ ತಾಯಿಯನ್ನು ವಿಚಾರಣೆಗೆ ಒಳಪಡಿಸಿದಾಗ ಕೊಲೆ ಮಾಡಿದ್ದು ಗೊತ್ತಾಗಿದೆ’ ಎಂದು ಎಸ್‌ಪಿ ಪೃಥ್ವಿಕ್ ಶಂಕರ್ ’ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.