ADVERTISEMENT

ಅಪಘಾತದಲ್ಲಿ ಗಾಯಗೊಂಡವರನ್ನು ಕಾರಿನಲ್ಲಿ ಸಾಗಿಸಿ ಮಾನವೀಯತೆ ಮೆರೆದ ಸಂಸದ ಜಾಧವ

​ಪ್ರಜಾವಾಣಿ ವಾರ್ತೆ
Published 7 ಜೂನ್ 2019, 16:39 IST
Last Updated 7 ಜೂನ್ 2019, 16:39 IST
ಡಾ.ಉಮೇಶ ಜಾಧವ
ಡಾ.ಉಮೇಶ ಜಾಧವ   

ಯಾದಗಿರಿ: ರಸ್ತೆ ಅಪಘಾತದಲ್ಲಿ ಗಾಯಗೊಂಡ ಇಬ್ಬರನ್ನು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ಕಲಬುರ್ಗಿ ಸಂಸದ ಡಾ.ಉಮೇಶ ಜಾಧವಮಾನವೀಯತೆ ಮೆರೆದಿದ್ದಾರೆ.

ಯಾದಗಿರಿ– ಹೈದರಾಬಾದ್‌ ರಸ್ತೆಯ ರೈಸ್‌ ಮಿಲ್ ಬಳಿ ಅಪಘಾತವಾಗಿ ಇಬ್ಬರು ಬಿದ್ದಿದ್ದರು. ಈ ವೇಳೆ ಇದೇ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ಸಂಸದ ಜಾಧವ ತಕ್ಷಣ ತಮ್ಮ ಕಾರಿನಲ್ಲಿ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದರು.

ಯಾದಗಿರಿಯಲ್ಲಿ ನಡೆದ ಬರ ಪರಿಹಾರ ಹಾಗೂ ಕಾರ್ಯನಿರ್ವಹಣೆ ಕುರಿತು ಸಭೆಯಲ್ಲಿ ಭಾಗವಹಿಸಿದ ನಂತರ ರೈಲ್ವೆ ಕೋಚ್‌ ಫ್ಯಾಕ್ಟರಿಗೆ ಸಂಸದರು ಪ್ರಯಾಣ ಬೆಳೆಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.