ADVERTISEMENT

ಹುಣಸಗಿ: ಪಟ್ಟಣ ಪಂಚಾಯಿತಿಗೆ ಮೊದಲ ಚುನಾವಣೆ ಇಂದು

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2024, 16:10 IST
Last Updated 5 ಸೆಪ್ಟೆಂಬರ್ 2024, 16:10 IST
–0––
–0––   

ಹುಣಸಗಿ: ಪಟ್ಟಣ ಪಂಚಾಯಿತಿ ಅಧ್ಯಕ್ಷ–ಉಪಾಧ್ಯ ಸ್ಥಾನಕ್ಕೆ ಶುಕ್ರವಾರ ಸೆ.6 ಚುನಾವಣೆ ನಡೆಯಲಿದೆ. ಈ ಸಂಬಂಧ ಚುನಾವಣೆ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.

ಅಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿಗೆ ಮಿಸಲಿದ್ದು, ಕಾಂಗ್ರೆಸ್ 14 ಸದಸ್ಯರಲ್ಲಿ ಮೊದಲ ಅಧ್ಯಕ್ಷ ಸ್ಥಾನಕ್ಕಾಗಿ ಮೂವರು ಅಭ್ಯರ್ಥಿಗಳ ಮಧ್ಯೆ ಪೈಪೋಟಿ ಇದೆ. ಶುಕ್ರವಾರವೇ ಯಾರು ಎಂಬುದು ನಿರ್ಧಾರ ಆಗಲಿದೆ. ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ ನಿಗದಿಯಾಗಿದೆ.

’ಚುನಾವಣೆ ಸಂದರ್ಭದಲ್ಲಿ ಸಂಸದ ಜಿ.ಕುಮಾರನಾಯಕ, ಶಾಸಕ ರಾಜಾ ವೇಣುಗೋಪಾಲನಾಯಕ ಆಗಮಿಸಲಿದ್ದಾರೆ’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ದಂಡಿನ ತಿಳಿಸಿದ್ದಾರೆ.

ADVERTISEMENT

ಕಳೆದ ಡಿಸೆಂಬರ್‌ನಲ್ಲಿ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.