ಗುರುಮಠಕಲ್: ಇಲ್ಲಿಗೆ ಸಮೀಪದ ಚಂಡರಕಿ ಗ್ರಾಮದಲ್ಲಿ ಮಂಗಳವಾರ ಜರುಗಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ.
ಚಂಡರಕಿ ಗ್ರಾಮದ ಟ್ರ್ಯಾಕ್ಟರ್ ಚಾಲಕ ಲಕ್ಷ್ಮಣ ವೆಂಕಟಪ್ಪ ಮುಷ್ಟಿ (22) ಕುಡಿತ ಹಾಗೂ ಇಸ್ಪೀಟ್ ಆಟಕ್ಕಾಗಿ ಹಣವನ್ನು ಹೊಂದಿಸಿಕೊಳ್ಳಲು ಕೊಲೆ ಮಾಡಿದ್ದನೆಂದು ಪೊಲೀಸರು ತಿಳಿಸಿದ್ದಾರೆ.
ಕೊಲೆಯಾದ ಕುರಿಗಾಹಿ ಭೀಮಪ್ಪ ಸಮನೋಳ ಅರೆ ಬುದ್ಧಿಮಾಂದ್ಯನಾಗಿದ್ದನು. ಆತನ ಕಿವಿಯಲ್ಲಿದ್ದ ಚಿನ್ನದ ಓಲೆಯನ್ನು ಕದಿಯುವ ಉದ್ದೇಶದಿಂದ ಮದ್ಯ ಕುಡಿಸಿ ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗೆ ಕೊರೊನಾ ಪರೀಕ್ಷೆ ನಡೆಸಿ ಕಲಬುರ್ಗಿಯ ಕಾರಾಗೃಹಕ್ಕೆ ಕಳುಹಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.