ADVERTISEMENT

ಕೋವಿಡ್‌ ಮಾರ್ಗಸೂಚಿ ಪಾಲಿಸಿ: ಉಪನ್ಯಾಸಕ ಎಂ.ಎಸ್.ಪಾಟೀಲ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2021, 12:06 IST
Last Updated 3 ಫೆಬ್ರುವರಿ 2021, 12:06 IST
ಸೈದಾಪುರ ಪಟ್ಟಣದ ವಿದ್ಯಾ ವರ್ಧಕ ಪ್ರೌಢ ಶಾಲೆಗೆ ಡಯಟ್‌ನ ಹಿರಿಯ ಉಪನ್ಯಾಸಕ ಎಂ.ಎಸ್.ಪಾಟೀಲ, ಶೇಖರಪ್ಪ ಭೇಟಿ ನೀಡಿ ಪರಿಶೀಲಿಸಿದರು
ಸೈದಾಪುರ ಪಟ್ಟಣದ ವಿದ್ಯಾ ವರ್ಧಕ ಪ್ರೌಢ ಶಾಲೆಗೆ ಡಯಟ್‌ನ ಹಿರಿಯ ಉಪನ್ಯಾಸಕ ಎಂ.ಎಸ್.ಪಾಟೀಲ, ಶೇಖರಪ್ಪ ಭೇಟಿ ನೀಡಿ ಪರಿಶೀಲಿಸಿದರು   

ಸೈದಾಪುರ: ‘ತರಗತಿಗಳು ಪ್ರಾರಂಭವಾಗಿದ್ದು, ಎಲ್ಲರೂ ಕೋವಿಡ್‌ ಮಾರ್ಗಸೂಚಿ ಪಾಲಿಸಬೇಕು’ ಎಂದು ಡಯಟ್‌ನ ಹಿರಿಯ ಉಪನ್ಯಾಸಕ ಎಂ.ಎಸ್.ಪಾಟೀಲ ಸಲಹೆ ನೀಡಿದರು.

ಪಟ್ಟಣದ ವಿದ್ಯಾ ವರ್ಧಕ ಪ್ರೌಢ ಶಾಲೆಗೆ ಭೇಟಿ ನೀಡಿ ಶೈಕ್ಷಣಿಕ ಚಟುವಟಿಕೆ ಪರಿಶೀಲಿಸಿ ಅವರು ಮಾತನಾಡಿದರು.

‘ಗ್ರಾಮೀಣ ಭಾಗದಲ್ಲಿ ಹಾಜರಾತಿ ಉತ್ತಮವಾಗಿದೆ. ದೊರೆತ ಸಮಯದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿಗೆ ಪ್ರಯತ್ನಿಸಬೇಕು. ಶಿಕ್ಷಕರು ಇದಕ್ಕಾಗಿ ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸಬೇಕು’ ಎಂದು ಕಿವಿಮಾತು ಹೇಳಿದರು.

ADVERTISEMENT

ಹಿರಿಯ ಉಪನ್ಯಾಸಕರಾದ ಶೇಖರಪ್ಪ ಮಾತನಾಡಿ,‘ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದ್ದಲ್ಲಿ ಗುಂಪುಗಳನ್ನು ರಚಿಸಬೇಕು. ಕೋವಿಡ್‌ ಮುಂಜಾಗ್ರತಾ ಕ್ರಮಗಳ ಕುರಿತು ಮಕ್ಕಳಿಗೆ ತಿಳಿಸಬೇಕು. ಅರಿವು ಮೂಡಿಸಬೇಕು’ ಎಂದರು.

ಎಪಿಎಫ್‌ ಸಂಚಾಲಕ ಲಕ್ಷ್ಮಣ ಪಾಟೀಲ, ಮುಖ್ಯಶಿಕ್ಷಕ ಲಿಂಗಾರೆಡ್ಡಿ ನಾಯಕ ಹಾಗೂ ಪ್ರಾಂಶುಪಾಲ ಕರಬಸಯ್ಯ ದಂಡಿಗಿಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.