ADVERTISEMENT

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ: ಜಾಥಾ

​ಪ್ರಜಾವಾಣಿ ವಾರ್ತೆ
Published 31 ಜನವರಿ 2021, 1:56 IST
Last Updated 31 ಜನವರಿ 2021, 1:56 IST
ಯಾದಗಿರಿಯಲ್ಲಿ ನಡೆದ 32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತೆ ಜಾಗೃತಿ ಜಾಥಾಗೆ ಶಾಸಕ ವೆಂಕಟರೆಡ್ಡಿ ಮುದ್ನಾಳ ಚಾಲನೆ ನೀಡಿದರು
ಯಾದಗಿರಿಯಲ್ಲಿ ನಡೆದ 32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತೆ ಜಾಗೃತಿ ಜಾಥಾಗೆ ಶಾಸಕ ವೆಂಕಟರೆಡ್ಡಿ ಮುದ್ನಾಳ ಚಾಲನೆ ನೀಡಿದರು   

ಯಾದಗಿರಿ: 32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪ್ರಾದೇಶಿಕ ಸಾರಿಗೆ ಇಲಾಖೆ ವತಿಯಿಂದ ಶನಿವಾರ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

ನಗರದ ತಹಶೀಲ್ದಾರರ ಕಚೇರಿ ಆವರಣದಲ್ಲಿ ಸ್ಥಳೀಯ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ ಜಾಗೃತಿ ಜಾಥಾಗೆ ಚಾಲನೆ ನೀಡಿದರು.

ಈ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ, ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ್, ಸಾರಿಗೆ ಇಲಾಖೆಯ ಅಧಿಕಾರಿ ವೆಂಕಟಪ್ಪ ಕಲಾಲ್, ಮೌನೇಶ್, ಡಿವೈಎಸ್ ಸಂತೋಷ್ ಬನ್ನಟ್ಟಿ, ನಗರ ಠಾಣೆಯ ಪಿಎಸ್‍ಐ ಸೌಮ್ಯ, ಗ್ರಾಮೀಣ ಠಾಣೆಯ ಪಿಎಸ್‍ಐ ಸುರೇಶ್ ಕುಮಾರ, ಸಂಚಾರಿ ಠಾಣೆಯ ಪಿಎಸ್‍ಐ ಪ್ರದೀಪ್ ಸೇರಿದಂತೆ ಸರ್ಕಾರಿ ಪ್ರೌಢ ಶಾಲೆಯ ಮುಖ್ಯಗುರುಗಳು ಹಾಗೂ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿ ರಸ್ತೆ ಸುರಕ್ಷತೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ADVERTISEMENT

ಜಾಥಾವು ನಗರದ ತಹಶೀಲ್ದಾರರ ಕಚೇರಿಯಿಂದ ನೂತನ ಬಸ್ ನಿಲ್ದಾಣದ ವರೆಗೆ ತೆರಳಿತು. ಸ್ಪೇಷನ್‌ ಬಜಾರ್‌ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.