ADVERTISEMENT

‘ಸಮುದಾಯ ಭವನ, ರುದ್ರಭೂಮಿಗೆ ಜಾಗ ನೀಡಿ’

​ಪ್ರಜಾವಾಣಿ ವಾರ್ತೆ
Published 22 ಮೇ 2022, 2:16 IST
Last Updated 22 ಮೇ 2022, 2:16 IST
ಯಾದಗಿರಿ ನಗರಸಭೆ ನೂತನ ಅಧ್ಯಕ್ಷ ಸುರೇಶ ಅಂಬಿಗೇರ ಅವರಿಗೆ ಹಿಂದುಳಿದ ವರ್ಗಗಳ ಒಕ್ಕೂಟದಿಂದ ಸನ್ಮಾನಿಸಲಾಯಿತು
ಯಾದಗಿರಿ ನಗರಸಭೆ ನೂತನ ಅಧ್ಯಕ್ಷ ಸುರೇಶ ಅಂಬಿಗೇರ ಅವರಿಗೆ ಹಿಂದುಳಿದ ವರ್ಗಗಳ ಒಕ್ಕೂಟದಿಂದ ಸನ್ಮಾನಿಸಲಾಯಿತು   

ಯಾದಗಿರಿ: ನಗರಸಭೆಗೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಸುರೇಶ ಅಂಬಿಗೇರ ಅವರಿಗೆ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಒಕ್ಕೂಟದ ಜಿಲ್ಲಾ ಘಟಕದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ರಾಜ್ಯಧ್ಯಕ್ಷ ಸೈದಪ್ಪ ಕೆ. ಗುತ್ತೇದಾರ ಮಾತನಾಡಿ, ನಗರದಲ್ಲಿ ಹಿಂದುಳಿದ ವರ್ಗಗಳ ಎಲ್ಲ ಜಾತಿಗಳ ಏಳ್ಗೆಗಾಗಿ ಒಕ್ಕೂಟ ರಚನೆ ಮಾಡಲಾಗಿದ್ದು, ನಗರಸಭೆಗೆ ಹಿಂದುಳಿದ ವರ್ಗಗಳಿಂದ ಅಧ್ಯಕ್ಷರಾಗಿರುವ ಅಂಬಿಗೇರ ಅವರಿಂದ ಉತ್ತಮ ಕೆಲಸ ಕಾರ್ಯಗಳು ನಿರೀಕ್ಷೆ ಇದೆ ಎಂದು ಹೇಳಿದರು.

ಹಿಂದುಳಿದ ವರ್ಗಗಳಿಗೆ ಸಮುದಾಯ ಭವನ, ರುದ್ರಭೂಮಿಗಳಿಗೆ ಜಾಗ ನೀಡಬೇಕೆಂದು ಮನವಿ ಮಾಡಿದರು.

ADVERTISEMENT

ಈ ಸಂದರ್ಭದಲ್ಲಿ ಒಕ್ಕೂಟದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಾಗರತ್ನಾ ಮೂರ್ತಿ ಅನಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀಕಾಂತ ನಿಡಜಂತಿ, ನಗರಸಭೆ ಮಾಜಿ ಅಧ್ಯಕ್ಷ ಸುರೇಶ ಕೋಟಿಮನಿ, ವಿಶ್ವಕರ್ಮ ಸಮಾಜದ ಜಿಲ್ಲಾ ಗೌರವಾಧ್ಯಕ್ಷ ದೇವಿಂದ್ರಪ್ಪ ಎಸ್. ಕನ್ನೆಕೌಳೂರು, ಜಿಲ್ಲಾ ಮಡಿವಾಳರ ಸಂಘದ ಪ್ರಧಾನ ಕಾರ್ಯದರ್ಶಿ ನಾಗಪ್ಪ ಮೊಗದಂಪುರ, ಸವಿತಾ ಸಮಾಜ ತಾಲ್ಲೂಕು ಅಧ್ಯಕ್ಷ ನಾಗಪ್ಪ ಹತ್ತಿಕುಣಿ, ಮಲ್ಲಿಕಾರ್ಜುನ ಅಲ್ಲಿಪುರ ಮರಂಕಲ್, ಸೈಬಾಜಖಾನ್, ಅಂಬೇಡ್ಕರ್ ಸೇನೆ ಜಿಲ್ಲಾದ್ಯಕ್ಷ ನಿಜಾಮುದ್ದಿನ್ ಯಾದಗಿರಿ, ಅಯ್ಯಣ್ಣ ಗುತ್ತೇದಾರ ನಾಯ್ಕಲ್, ಕಟ್ಟಡ ಕಾರ್ಮಿಕರ ಜಿಲ್ಲಾಧ್ಯಕ್ಷ ಭೀಮರಾಯ ಸಗರ ಖಾನಳ್ಳಿ
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.