ADVERTISEMENT

ಜಿಲ್ಲೆಯಾದ್ಯಂತ ಸಂಭ್ರಮದ ಮಣ್ಣೆತ್ತಿನ ಅಮಾವಾಸ್ಯೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2019, 15:53 IST
Last Updated 2 ಜುಲೈ 2019, 15:53 IST
ಯಾದಗಿರಿ ತಾಲ್ಲೂಕಿನ ಹತ್ತಿಕುಣಿ ಬಳಿ ಮಣ್ಣೆತ್ತಿನ ಅಮಾವಾಸ್ಯೆ ಅಂಗವಾಗಿ ಎತ್ತುಗಳ ಮೂರ್ತಿಗಳನ್ನು ಜನರು ಖರೀದಿಸಿದರು
ಯಾದಗಿರಿ ತಾಲ್ಲೂಕಿನ ಹತ್ತಿಕುಣಿ ಬಳಿ ಮಣ್ಣೆತ್ತಿನ ಅಮಾವಾಸ್ಯೆ ಅಂಗವಾಗಿ ಎತ್ತುಗಳ ಮೂರ್ತಿಗಳನ್ನು ಜನರು ಖರೀದಿಸಿದರು   

ಯಾದಗಿರಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಣ್ಣೆತ್ತಿನ ಅಮಾವಾಸ್ಯೆಯನ್ನು ರೈತಾಪಿ ಜನರು ಸಂಭ್ರಮದಿಂದ ಆಚರಿಸಿದರು.

ಜಿಲ್ಲೆಯ ಕೆಲ ದೇಗುಲಗಳಲ್ಲಿ ಅಮಾವಾಸ್ಯೆ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಗರ, ಹಳ್ಳಿಗಳಲ್ಲಿ ಮಣ್ಣಿನ ಎತ್ತುಗಳಿಗೆ ಪೂಜೆ ಸಲ್ಲಿಸಲಾಯಿತು.

ರೈತರು ತಮ್ಮ ಮನೆಯ ದೇವರ ಜಗಲಿ ಮೇಲೆ ಇಟ್ಟು ತಾವು ತಯಾರಿಸಿದ ಹೋಳಿಗೆ, ಕಡುಬು, ಅನ್ನ ಇನ್ನಿತರ ಭಕ್ಷಗಳ ನೈವೇದ್ಯ ಅರ್ಪಿಸಿ ಪೂಜೆ ಸಲ್ಲಿಸಿದರು.

ADVERTISEMENT

ಜಿಲ್ಲೆಯ ಸುರಪುರ, ಶಹಾಪುರ, ಗುರುಮಠಕಲ್, ಹುಣಸಗಿ, ಕೆಂಭಾವಿ, ಯರಗೋಳ ಸೇರಿದಂತೆ ಜಿಲ್ಲೆಯಾದ್ಯಂತ ಮಣ್ಣೆತ್ತಿನ ಅಮಾವಾಸ್ಯೆ ಆಚರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.