ADVERTISEMENT

ಶನಿವಾರ ಸಂತೆ; ಕಾಣದ ‘ಅಂತರ’

​ಪ್ರಜಾವಾಣಿ ವಾರ್ತೆ
Published 9 ಮೇ 2021, 5:44 IST
Last Updated 9 ಮೇ 2021, 5:44 IST
ಯರಗೋಳ ಗ್ರಾಮದಲ್ಲಿ ನಡೆದ ಶನಿವಾರ ಸಂತೆಯಲ್ಲಿ ಜನರು ವ್ಯಕ್ತಿಗತ ಅಂತರ ಕಾಪಾಡಿಕೊಳ್ಳದೆ ಖರೀದಿಗೆ ಮುಗಿಬಿದ್ದರು
ಯರಗೋಳ ಗ್ರಾಮದಲ್ಲಿ ನಡೆದ ಶನಿವಾರ ಸಂತೆಯಲ್ಲಿ ಜನರು ವ್ಯಕ್ತಿಗತ ಅಂತರ ಕಾಪಾಡಿಕೊಳ್ಳದೆ ಖರೀದಿಗೆ ಮುಗಿಬಿದ್ದರು   

ಯರಗೋಳ: ಗ್ರಾಮದಲ್ಲಿ ಶನಿವಾರ ಸಂತೆಯನ್ನು ರದ್ದುಗೊಳಿಸಿದ್ದರೂ ಮಾರುಕಟ್ಟೆ ಸ್ಥಳದಲ್ಲಿ ವ್ಯಾಪಾರಿಗಳು, ಜನರು ಭಾರಿ ಸಂಖ್ಯೆಯಲ್ಲಿ ಸೇರುತ್ತಿದ್ದು, ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಗೆ ತೂರಲಾಗುತ್ತಿದೆ. ಗ್ರಾಮ ಪಂಚಾಯಿತಿ ಸಿಬ್ಬಂದಿ ಜನರನ್ನು ಚದುರಿಸಲು ಹರಸಾಹಸ ಪಡುವಂತಾಗಿದೆ.

ತರಕಾರಿ, ಹಣ್ಣು, ದಿನಸಿ, ಮಾಂಸ, ಬಟ್ಟೆ ವ್ಯಾಪಾರ ಮಾಡುತ್ತಿರುವ ದೃಶ್ಯಗಳು ಶನಿವಾರ ಕಂಡು ಬಂದವು. ಜನರು ವ್ಯಕ್ತಿಗತ ಅಂತರ ಮರೆತು ಖರೀದಿ ಮಾಡುತ್ತಿದ್ದವರು. ಕೆಲವರು ಮಾಸ್ಕ್ ಕೂಡ ಧರಿಸಿರಲಿಲ್ಲ. ಹೊಟೇಲ್‌ಗಳು ಎಂದಿನಂತೆ ತೆರೆದಿದ್ದು, ಲಾಕ್‌ಡೌನ್ ನೆಪ ಮಾತ್ರ ಎನ್ನುವಂತಾಗಿದೆ.

ಪಿಡಿಒ ರಾಮು ಪವಾರ್ ಅವರು ಅನಾರೋಗ್ಯದ ಕಾರಣ ರಜೆಯಲ್ಲಿದ್ದಾರೆ. ಹೀಗಾಗಿ ಅವರ ಅನುಪಸ್ಥಿತಿಯಲ್ಲಿ ಕೋವಿಡ್ ಮಾರ್ಗಸೂಚಿ ಜಾರಿಗೆ ತರಲು ಸಾಧ್ಯವಾಗುತ್ತಿಲ್ಲ ಎಂದು ಗ್ರಾ.ಪಂ ಸದಸ್ಯರೊಬ್ಬರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.