ಹುಣಸಗಿ: ‘ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುತ್ತಿರುವ ಪ್ರಾಮಾಣಿಕ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಅವರನ್ನು ವರ್ಗಾವಣೆ ಮಾಡಬಾರದು’ ಎಂದು ಮಾಜಿ ಸಚಿವ ನರಸಿಂಹನಾಯಕ (ರಾಜೂಗೌಡ) ಒತ್ತಾಯಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
‘ಜಿಲ್ಲೆಯಲ್ಲಿ ಮಟ್ಕಾ, ಜೂಜಾಟ, ಅಕ್ರಮ ಮರಳುಗಾರಿಕೆ ನಿಯಂತ್ರಿಸಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅವಿರತ ಕರ್ತವ್ಯ ನಿರ್ವಹಿಸಿದ್ದಾರೆ. ಯಾವುದೋ ಕಾರಣದಿಂದಾಗಿ ದಕ್ಷ ಅಧಿಕಾರಿ ಪೃಥ್ವಿಕ್‌ಶಂಕರ್ ವರ್ಗಾವಣೆಯಾಗಬಾರದು. ಅಲ್ಲದೆ ವೈಯಕ್ತಿಕ ನನಗೂ ಬೇಸರವಾಗಲಿದೆ’ ಎಂದು ತಿಳಿಸಿದ್ದಾರೆ.
‘ಹಿಂದುಳಿದ ಈ ಪ್ರದೇಶದಲ್ಲಿ ಅಹಿತಕರ, ಅಕ್ರಮ ಚಟುವಟಿಕೆಗಳ ಮಟ್ಟ ಹಾಕಿ ಕಾನೂನು ಸುವ್ಯವಸ್ಥೆ, ಸಾಮರಸ್ಯ ವಾತಾವರಣ ಉಂಟು ಮಾಡುತ್ತಿರುವ ಪೃಥ್ವಿಕ್ ಅವರನ್ನು ಯಾವುದೇ ಕಾರಣಕ್ಕೂ ವರ್ಗಾವಣೆ ಮಾಡಬಾರದು’ ಎಂದು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.