ADVERTISEMENT

ಯಾದಗಿರಿ: ಬಿಜೆಪಿ, ಕಾಂಗ್ರೆಸ್‌ನಿಂದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ

ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲು

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2020, 6:52 IST
Last Updated 29 ಅಕ್ಟೋಬರ್ 2020, 6:52 IST
ಯಾದಗಿರಿ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ವಿಲಾಸ ಪಾಟೀಲ ಹಾಗೂ ಉಪಾಧ್ಯಕ್ಷೆ ಸ್ಥಾನಕ್ಕೆ ಪ್ರಭಾವತಿ ಮಾರು ಕಲಾಲ್ ನಾಮಪತ್ರ ಸಲ್ಲಿಸಿದರು
ಯಾದಗಿರಿ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ವಿಲಾಸ ಪಾಟೀಲ ಹಾಗೂ ಉಪಾಧ್ಯಕ್ಷೆ ಸ್ಥಾನಕ್ಕೆ ಪ್ರಭಾವತಿ ಮಾರು ಕಲಾಲ್ ನಾಮಪತ್ರ ಸಲ್ಲಿಸಿದರು   

ಯಾದಗಿರಿ: ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ವಾರ್ಡ್‌ ಸಂಖ್ಯೆ 3ರ ಸದಸ್ಯ ವಿಲಾಸ ಪಾಟೀಲ ಹಾಗೂ ಉಪಾಧ್ಯಕ್ಷೆ ಸ್ಥಾನಕ್ಕೆ ವಾರ್ಡ್‌ ಸಂಖ್ಯೆ 9ರ ಸದಸ್ಯೆ ಪ್ರಭಾವತಿ ಮಾರುತಿ ಕಲಾಲ್ ಗುರುವಾರ ನಾಮಪತ್ರ ಸಲ್ಲಿಸಿದರು.

ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಗುರುವಾರ ಬೆಳಿಗ್ಗೆ 11 ಗಂಟೆವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿತ್ತು. ಮಧ್ಯಾಹ್ನ 3 ಗಂಟೆಗೆ ನಾಮಪತ್ರ ಪರಿಶೀಲನೆ ನಡೆಯಲಿದೆ.

ಯಾದಗಿರಿ ನಗರಸಭೆಯಲ್ಲಿ 31ವಾರ್ಡ್‌ಗಳಿದ್ದು,16 ಬಿಜೆಪಿ, 11 ಕಾಂಗ್ರೆಸ್‌, ಜೆಡಿಎಸ್‌ 3, ಪಕ್ಷೇತರ ಒಬ್ಬ ಸದಸ್ಯರಿದ್ದಾರೆ. ಜೆಡಿಎಸ್‌ ಮೂವರು ಸದಸ್ಯರಲ್ಲಿ ಒಬ್ಬರು ನಿಧನರಾಗಿದ್ದು, ಇಬ್ಬರು ಬಿಜೆ‍ಪಿಗೆ ಬಾಹ್ಯ ಬೆಂಬಲ ನೀಡಲಿದ್ದಾರೆ. ಪಕ್ಷೇತರರು ಬಿಜೆಪಿಗೆ ಬೆಂಬಲಿಸಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ADVERTISEMENT

ಈ‌ ವೇಳೆ ಪಕ್ಷದ ಮುಖಂಡರಾದ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬಸವರಾಜ ಚಂಡರಕಿ, ಪಕ್ಷದ ಮುಖಂಡ ಸಿದ್ದಪ್ಪ ಹೊಟ್ಟಿ, ನಗರಸಭೆ ಸದಸ್ಯರಾದ ಸ್ವಾಮಿದೇವ ದಾಸನಕೇರಿ, ಅಂಬಯ್ಯ ಶಾಬಾದಿ ಇದ್ದರು.

ಕಾಂಗ್ರೆಸ್‌ನಿಂದಲೂ ನಾಮಪತ್ರ ಸಲ್ಲಿಕೆ:ಯಾದಗಿರಿ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ವಾರ್ಡ್‌ ಸಂಖ್ಯೆ 20ರ ಸದಸ್ಯ ಮನ್ಸೂರ್ ಅಹಮ್ಮದ್ ಆಫಕಾನಿ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ವಾರ್ಡ್‌ ಸಂಖ್ಯೆ 23ರ ಸದಸ್ಯೆ ನಿರ್ಮಲಾ ಭೋಜರಾಜ ಜಗನ್ನಾಥ ನಾಮಪತ್ರ ಸಲ್ಲಿಸಿದರು.

ಈ ವೇಳೆ ನಗರಸಭೆ ಸದಸ್ಯರಾದ ವೆಂಕಟರೆಡ್ಡಿ‌ ವನಕೇರಿ, ಚನ್ನಕೇಶವಗೌಡ ಬಾಣತಿಹಾಳ, ಗಣೇಶ್ ದುಪ್ಪಲ್ಲಿ, ಹಣಮಂತ ನಾಯಕ, ಅವಿನಾಶ ಜಗನ್ನಾಥ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.