ADVERTISEMENT

ಯಾದಗಿರಿ: ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2020, 15:54 IST
Last Updated 7 ಏಪ್ರಿಲ್ 2020, 15:54 IST

ಯಾದಗಿರಿ: ಜಿಲ್ಲೆಯ ವಿವಿಧೆಡೆ ಸೋಮವಾರ ತಡರಾತ್ರಿ, ಮಂಗಳವಾರ ಸಂಜೆ ಸಾಧಾರಣ ಮಳೆಯಾಗಿದೆ. ಬೆಳಿಗ್ಗೆಯಿಂದ ಬಿಸಿಲು ಇದ್ದು, ಸಂಜೆ ವೇಳೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು.

ಸಂಜೆ ವೇಳೆಯಲ್ಲಿ ಜಿಲ್ಲೆಯ ವಿವಿಧೆಡೆ ಕಡೆ ಜಿಟಿ ಜಿಟಿ ಮಳೆಯಾಗಿದೆ. ಮಳೆ ಬಂದ ನಂತರ ತಂಪಾದ ವಾತಾವರಣ ನಿರ್ಮಾಣವಾಗಿತ್ತು. ವಡಗೇರಾ ತಾಲ್ಲೂಕಿನ ತುಮಕೂರು, ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದಲ್ಲಿ ಮಂಗಳವಾರ ಆಲಿಕಲ್ಲು ಮಳೆಯಾಗಿದೆ. ಸುರಪುರ, ಶಹಾಪುರ, ಗುರುಮಠಕಲ್‌, ಯರಗೋಳ, ಕಕ್ಕೇರಾ ಮುಂತಾದೆಡೆ ಜಿಟಿ ಜಿಟಿ ಮಳೆಯಾಗಿದೆ.

ಭತ್ತಕ್ಕೆ ಹಾನಿ:ಅಕಾಲಿಕ ಮಳೆಯಿಂದ ಭತ್ತಕ್ಕೆ ಹಾನಿಯಾಗಿದೆ. ನೀರಾವರಿ ಪ್ರದೇಶಗಳಲ್ಲಿ ಭತ್ತ ಬೆಳೆಯಲಾಗಿದ್ದು, ಈಗ ಕೊಯ್ಲುಗೆ ಬಂದಿದೆ. ಈ ಮಳೆಯಿಂದ ಭತ್ತ ನೆಲಕಚ್ಚುವ ಸಾಧ್ಯವಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.