ಯಾದಗಿರಿ: ಕೊರೊನಾ ಕಾರಣ ಡಿ.ದೇವರಾಜ ಅರಸು 105ನೇ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಬೇಕು ಎಂದು ಪ್ರಭಾರಿ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಎಸ್. ಸೋಮನಾಳ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು 105ನೇ ಜನ್ಮ ದಿನಾಚರಣೆಯಲ್ಲಿಆಗಸ್ಟ್ 20ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಅಂದು ಬೆಳಿಗ್ಗೆ ಜಿಲ್ಲೆಯ ಎಲ್ಲಾ ಸರ್ಕಾರಿ, ಸರ್ಕಾರೇತರ ಕಚೇರಿಗಳಲ್ಲಿ, ಅನುದಾನಿತ ಶಾಲಾ, ಕಾಲೇಜುಗಳಲ್ಲಿ, ವಸತಿ ನಿಲಯಗಳಲ್ಲಿ ಡಿ.ದೇವರಾಜ ಅರಸು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಸರಳವಾಗಿ ಜಯಂತಿಯನ್ನು ಆಚರಿಸಬೇಕು ಎಂದು ಸೂಚಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಭು ದೊರೆ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಚನ್ನಬಸಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರಭಾಕರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.