ಹುಣಸಗಿ: ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸಾಕಷ್ಟು ಬದಲಾವಣೆ ಕಂಡು ಕೊಳ್ಳಬಹುದಾಗಿದೆ ಎಂದು ಪ್ರಾಚಾರ್ಯ ಸೋಮಶೇಖ ಪಂಜಗಲ್ಲ ಹೇಳಿದರು.
ಹುಣಸಗಿ ತಾಲ್ಲೂಕಿನ ಕೊಡೇಕಲ್ಲ ಗ್ರಾಮದ ಜನಕ ಪದವಿ ಮಹಾವಿದ್ಯಾಲದಲಿ ಹಮ್ಮಿಕೊಂಡಿದ್ದ ಎನ್‌ಎಸ್‌ಎಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಯಲ್ಲಿ ಸ್ವಯಂಸೇವೆ, ಆತ್ಮ ವಿಶ್ವಾಸ, ನಾಯಕತ್ವಗುಣ ಹಾಗೂ ಸಮಾಜ ಸೇವಾ ಗುಣ ಸೇರಿದಂತೆ ಇತರ ಗುಣಗಳನ್ನು ಕಲಿಸುತ್ತದೆ ಎಂದು ಹೇಳಿದರು.
ಕಾಲೇಜು ಆವರಣ ಸ್ವಚ್ಚತೆ ಕಾರ್ಯ ಕೈಗೊಳ್ಳಲಾಯಿತು.
ಉಪನ್ಯಾಸಕ ನಾಗರಾಜ ಪಾಟೀಲ, ಶಶಿಕುಮಾರ ಪತ್ತಾರ, ಸುಜಾತಾ ವಂಗಿ, ಸಂಗೀತಾ ದೊರಿಗೋಳ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.