ADVERTISEMENT

ಕಲಿಕೆ ಜತೆ ಸೇವಾ ಗುಣ ಬೆಳೆಸಿಕೊಳ್ಳಿ: ಪ್ರೊ.ಜಗದೀಶ ನಾಯಕ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2021, 14:31 IST
Last Updated 29 ನವೆಂಬರ್ 2021, 14:31 IST
ಹುಣಸಗಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಕಾರ್ಯಕ್ರಮದಲ್ಲಿ ಡಾ.ಜಗದೀಶನಾಯಕ ಮಾತನಾಡಿದರು
ಹುಣಸಗಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಕಾರ್ಯಕ್ರಮದಲ್ಲಿ ಡಾ.ಜಗದೀಶನಾಯಕ ಮಾತನಾಡಿದರು   

ಹುಣಸಗಿ: ವಿದ್ಯಾರ್ಥಿಗಳು ಕಲಿಕೆಯ ಜೊತೆಯಲ್ಲಿ ಸೇವಾಗುಣವನ್ನು ಅಳವಡಿಸಿಕೊಳ್ಳುವ ಮೂಲಕ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ.ಜಗದೀಶ ನಾಯಕ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳು ಕೇವಲ ಪಠ್ಯದ ವಿಷಯಕ್ಕೆ ಸಿಮಿತವಾಗದೇ ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳಬೇಕು. ಅಲ್ಲದೆ ಸಮಾಜದ ನಾಡಿಮಿಡಿತ ಅರಿತು ಜನರ ನೋವು ನಲಿವಿನಲ್ಲಿ ಪಾಲ್ಗೊಳ್ಳಬೇಕು ಎಂದರು.

ಮುಖ್ಯಶಿಕ್ಷಕ ಟಿ.ಎಸ್ ಸಜ್ಜನ್ ಮಾತನಾಡಿ, ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳುವದರ ಜೊತೆಗೆ ಸಾಮಾಜಿಕ ಕಾರ್ಯಕ್ಕೆ ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಹೇಳಿದರು.

ADVERTISEMENT

ಎಸ್.ಡಿ.ಎಂ.ಸಿ ಅಧ್ಯಕ್ಷ ಹೊನ್ನಕೇಶವ ದೇಸಾಯಿ, ಎನ್.ಎಸ್.ಎಸ್. ಘಟಕಾಧಿಕಾರಿ ನಿಂಗಣ್ಣ ಚವ್ಹಾಣ ಮಾತನಾಡಿದರು.

ಎ.ಎಸ್ ಮೇಟಿ, ಲಕ್ಷ್ಮಿ ಮೇಟಿ ನಿರೂಪಿಸಿದರು. ಕೆ.ವಿ ಡೋಬಳಕರ್ ಸ್ವಾಗತಿಸಿದರು. ಭೀಮಣ್ಣ ವಾಲ್ಮೀಕಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.