ADVERTISEMENT

ವಡಗೇರಾ: ‘ಸಸ್ಯಗಳ ಬೆಳವಣಿಗೆಗೆ ಪೋಷಕಾಂಶಗಳು ಅವಶ್ಯ’

​ಪ್ರಜಾವಾಣಿ ವಾರ್ತೆ
Published 22 ಮೇ 2025, 13:52 IST
Last Updated 22 ಮೇ 2025, 13:52 IST
ವಡಗೇರಾದ ಗ್ರಾಮ ಪಂಚಾಯಿತಿ ಆವರಣದಲ್ಲಿ ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಕೆ ವಿಧಾನ ಕುರಿತು ರೈತರಿಗೆ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಗಣಪತಿ ಮಾಹಿತಿ ನೀಡಿದರು 
ವಡಗೇರಾದ ಗ್ರಾಮ ಪಂಚಾಯಿತಿ ಆವರಣದಲ್ಲಿ ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಕೆ ವಿಧಾನ ಕುರಿತು ರೈತರಿಗೆ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಗಣಪತಿ ಮಾಹಿತಿ ನೀಡಿದರು    

ವಡಗೇರಾ: ‘ಸಸ್ಯಗಳ ಬೆಳವಣಿಗೆಗೆ ಮತ್ತು ಅಭಿವೃದ್ದಿಗೆ ಹದಿನೇಳು ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೆ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕಡಿಮೆಯಾಗುತ್ತದೆ’ ಎಂದು ಪಟ್ಟಣದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಗಣಪತಿ ಹೇಳಿದರು.

ವಡಗೇರಾ ಪಟ್ಟಣದ ಗ್ರಾಮ ಪಂಚಾಯಿತಿ ಆವರಣದಲ್ಲಿ ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಕೆ ವಿಧಾನ ಕುರಿತು ರೈತರಿಗಾಗಿ ಹಮ್ಮಿಕೊಂಡಿದ್ದ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ರೈತರು ಕೇವಲ ಒಂದೋ ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿಎಪಿಯನ್ನು ರೂಢಿಗತವಾಗಿ ಬಳುಸುತ್ತಿರುವುದರಿಂದ ಬೆಳೆಗಳಿಗೆ ಬೇಕಾದ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ದೊರೆಯುವುದಿಲ್ಲ’ ಎಂದು ತಿಳಿಸಿದರು.

ADVERTISEMENT

ಬಾಹ್ಯ ಪೋಷಕಾಂಶವನ್ನು ಬೆಳೆಗಳಿಗೆ ನೀಡುವದು ಅನಿವಾರ್ಯ. ಬಾಹ್ಯ ಪೋಷಕಾಂಶಗಳಾದ ಸಾವಯವ ಗೊಬ್ಬರ, ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ, ಹಿಂಡಿ ಇತ್ಯಾದಿಗಳ ಜತೆ ರಸಗೊಬ್ಬರಗಳಲ್ಲಿ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ನೇರವಾಗಿ ದೊರೆಯುತ್ತವೆ. ಅದಕ್ಕಾಗಿ ಇವುಗಳನ್ನು ಬಳಕೆ ಮಾಡಿ ಎಂದು ರೈತರಿಗೆ ಸಲಹೆ ನೀಡಿದರು.

ರೈತರು ರಸಗೊಬ್ಬರಕ್ಕೆ ಒಂದೇ ಸಂಸ್ಥೆ ಅಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೇ ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಪೋಟ್ಯಾಷ್ ಒದಗಿಸುವ ಇತರೆ ಸಂಯುಕ್ತ ಗೊಬ್ಬರಗಳಾದ 15:15:15, 10:26:12:32:16, 22:22:14, 14:35:14, 17:17:17, 14:28:14, 19:19:19 ಹಾಗೂ20:10:10 ರಸಗೊಬ್ಬರಗಳನ್ನು ಬಳಸಬೇಕು ಎಂದು ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.