ಯಾದಗಿರಿ: ‘ನಿತ್ಯದ ಒತ್ತಡ ಜೀವನದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಉತ್ತಮ ಆರೋಗ್ಯಕ್ಕೆ ಪೌಷ್ಟಿಕ ಆಹಾರ, ಯೋಗ, ವ್ಯಾಯಾಮ ಅವಶ್ಯಕ’ ಎಂದು ಜಿಲ್ಲಾ ಆಯುಷ್ ಆಸ್ಪತ್ರೆ ತಜ್ಞವೈದ್ಯ ಡಾ.ಮಂಜುನಾಥ ಅರಕೇರಿ ಹೇಳಿದರು.
ನಗರದ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವತಿಯಿಂದ ಜಿಲ್ಲೆಯ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಯೋಗ ಶಿಕ್ಷಣ ಮತ್ತು ಆರೋಗ್ಯದ ಕುರಿತು ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಮೂರು ತಾಲ್ಲೂಕಿನ ದೈಹಿಕ ಶಿಕ್ಷಣ ಶಿಕ್ಷಕರು, ವೀರಭದ್ರ ಬಡಿಗೇರ, ನಾಗಣ್ಣಗೌಡ ಪಾಟೀಲ ಸನ್ನೆಕ್ಕೆಪ್ಪ, ಸಂತೋಷಕುಮಾರ, ರವಿ ಜಾಗೀರದಾರ್ ಹಾಗೂ ಸಂಪನ್ಮೂಲ ದೈಹಿಕ ಶಿಕ್ಷಣ ಶಿಕ್ಷಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.