ADVERTISEMENT

ಕೋವಿಡ್‍ನಿಂದ ವೃದ್ಧೆ ಸಾವು

​ಪ್ರಜಾವಾಣಿ ವಾರ್ತೆ
Published 25 ಜುಲೈ 2020, 15:56 IST
Last Updated 25 ಜುಲೈ 2020, 15:56 IST

ಸುರಪುರ: ‘ರಂಗಂಪೇಟೆಯ ನಿವಾಸಿ ಮೈರೂನಬಿ ಖಾಜಾ ಮಹಿನೋದ್ದೀನ್ (65) ಕೋವಿಡ್‍ನಿಂದ ನಿಧನರಾಗಿದ್ದಾರೆ. ಮೃತರು ಮಧುಮೇಹ, ರಕ್ತದೊತ್ತಡ ಹಾಗೂ ಅಸ್ತಮಾದಿಂದ ಬಳಲುತ್ತಿದ್ದರು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಆರ್.ವಿ. ನಾಯಕ ತಿಳಿಸಿದ್ದಾರೆ.

‘ನಗರದ ಸರ್ಕಾರಿ ಆಸ್ಪತ್ರೆಗೆ ಶುಕ್ರವಾರ ಸಂಜೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಕೋವಿಡ್ ದೃಢ ಪಟ್ಟಿತ್ತು. ಜಿಲ್ಲಾ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ರಾತ್ರಿ ಅಸುನೀಗಿದ್ದಾರೆ. ಮಾರ್ಗಸೂಚಿ ಪ್ರಕಾರ ಅಂತ್ಯಕ್ರಿಯೆ ನಡೆಸಲಾಗಿದೆ’ ಎಂದು ತಿಳಿಸಿದರು.

‘ಶನಿವಾರ ನಗರ ಸೇರಿದಂತೆ ತಾಲ್ಲೂಕಿನಲ್ಲಿ ಒಟ್ಟು 15 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ’ ಎಂದು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.